HomeLatest Newsಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

ಗಮನಿಸಿ : ವಿದ್ಯುತ್ ಮಾಪಕವನ್ನು 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಲು ಜೆಸ್ಕಾಂ ಸೂಚನೆ

ಜೆಸ್ಕಾಂ ವ್ಯಾಪ್ತಿಯಲ್ಲಿ ಕಂಪನಿಯ ನಿಯಮಾನುಸಾರ ಎಲ್ಲಾ ಸ್ಥಾವರದಲ್ಲಿರುವ ಮೀಟರ್‌ಗಳನ್ನು ಆಪ್ಟಿಕಲ್ ಪ್ರೋಬ್ ಡಿವೈಸ್ ಮೂಲಕವೇ ರೀಡಿಂಗ್ ಮಾಡಬೇಕಾಗಿದ್ದು, ವಿದ್ಯುತ್ ಗ್ರಾಹಕರು ತಮ್ಮ ಸ್ಥಾವರದ ವಿದ್ಯುತ್ ಮಾಪಕವನ್ನು ಕಡ್ಡಾಯವಾಗಿ ನೆಲದಿಂದ 5 ಅಡಿ ಎತ್ತರದಲ್ಲಿ ಅಳವಡಿಸಿಕೊಳ್ಳಬೇಕು.

ವಿದ್ಯುತ್ ಮಾಪಕಗಳು ಗೋಚರಿಸುವ ಹಾಗೂ ಓದಲು ಅನುಕೂಲವಾಗುವ ಸ್ಥಳದಲ್ಲಿ ಇರಬೇಕು. ಮೀಟರ್ ಓದುವವರಿಗೆ ಸ್ಥಳವಿಲ್ಲದಿದ್ದಲ್ಲಿ ಸ್ಥಳ ಒದಗಿಸುವ ಹಾಗೆ ಅ.25 ರೊಳಗಾಗಿ ಅಳವಡಿಸಿಕೊಳ್ಳಬೇಕು.

ಈ ನಿಯಮ ಪಾಲನೆ ಮಾಡದಿದ್ದಲ್ಲಿ ಯಾವುದೇ ಮುನ್ಸೂಚನೆ ಇಲ್ಲದೆ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗುವುದು ಎಂದು ಬಳ್ಳಾರಿ ನಗರ ಜೆಸ್ಕಾಂ ಉಪವಿಭಾಗ-1 ರ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular