HomeKarnatakaBIG NEWS: ಘಾಟಿ ಸುಬ್ರಹ್ಮಣ್ಯ ದೇವಾಲದಲ್ಲಿ ಅಂಗಡಿಗಳ ತೆರವುಗೊಳಿಸಿದ ಅಧಿಕಾರಿಗಳು

BIG NEWS: ಘಾಟಿ ಸುಬ್ರಹ್ಮಣ್ಯ ದೇವಾಲದಲ್ಲಿ ಅಂಗಡಿಗಳ ತೆರವುಗೊಳಿಸಿದ ಅಧಿಕಾರಿಗಳು

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಘಾಟಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಅಧಿಕಾರಿಗಳು ಅಂಗಡಿಗಳ ತೆರವು ಕಾರ್ಯಾಚರಣೆ ನಡೆಸಿದ್ದಾರೆ. ದೇವಾಲಯದ ಬಳಿ ಇದ್ದ ಸಾಲು ಸಾಲು ಅಂಗಡಿಗಳನ್ನು ತೆರವುಗೊಳಿಸಲಾಗಿದೆ.

ಗುತ್ತಿಗೆ ಅವಧಿ ಮುಗಿದರೂ ಖಾಲಿ ಮಾಡದ ಕಾರಣ ಅಂಗಡಿಗಳನ್ನು ತೆರವು ಮಾಡಲಾಗಿದೆ. ಅಂಗಡಿಗಳನ್ನು ತೆರವು ಮಾಡುವಂತೆ ಈ ಹಿಂದೆ ಹಲವು ಬಾರಿ ನೋಟಿಸ್ ನೀಡಿದ್ದರೂ ಅಂಗಡಿ ಮಾಲೀಕರು ತೆರವು ಮಾಡಿರಲಿಲ್ಲ ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರ ಆದೇಶದ ಮೇರೆಗೆ ಎಇ ನಾರಾಯಣಸ್ವಾಮಿ ನೇತೃತ್ವದಲ್ಲಿ ಅಂಗಡಿಗಳನ್ನು ತೆರವು ಮಾಡಲಾಗುತ್ತಿದೆ.

ಕೆಲವು ಅಂಗಡಿಗಳಿಗೆ ಬೀಗ ಹಾಕಿ ಅಂಗಡಿ ತೆರವು ಮಡುವಂತೆಸೂಚನೆ ನಿಡಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular