HomeIndiaಮೆಟ್ರೋ ನಿಲ್ದಾಣದಿಂದ ಹಾರಿ ಪ್ರಾಣ ಕಳೆದುಕೊಂಡ ಪತ್ನಿ ಕೊಂದು ಪರಾರಿಯಾಗಿದ್ದ ಆರೋಪಿ

ಮೆಟ್ರೋ ನಿಲ್ದಾಣದಿಂದ ಹಾರಿ ಪ್ರಾಣ ಕಳೆದುಕೊಂಡ ಪತ್ನಿ ಕೊಂದು ಪರಾರಿಯಾಗಿದ್ದ ಆರೋಪಿ

ಗಾಜಿಯಾಬಾದ್: ಪತ್ನಿಯನ್ನು ಕೊಂದ ಆರೋಪಿಯಾಗಿರುವ 30 ವರ್ಷದ ವ್ಯಕ್ತಿಯೊಬ್ಬ ಗಾಜಿಯಾಬಾದ್‌ ನ ಕೌಶಂಬಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.

ಇಂದು ಬೆಳಗ್ಗೆ 11:45ರ ಸುಮಾರಿಗೆ ಕೌಶಂಬಿ ಮೆಟ್ರೋ ನಿಲ್ದಾಣದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಪತ್ನಿ ಗುರುಗ್ರಾಮದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತ ಗೌರವ್ ಶರ್ಮಾ ಅವರ ಪತ್ನಿ ಹರಿಯಾಣದ ಗುರುಗ್ರಾಮ್‌ನಲ್ಲಿ ಭಾನುವಾರ ಶವವಾಗಿ ಪತ್ತೆಯಾಗಿದ್ದಾರೆ. ಗೌರವ್ ತನ್ನ ಪತ್ನಿಯನ್ನು ಕೊಲೆ ಮಾಡಿದ ಆರೋಪಿಯಾಗಿದ್ದು, ಕೊಲೆ ಮಾಡಿ ಆತ ಪರಾರಿಯಾಗಿದ್ದ. ಗೌರವ್ ಶರ್ಮಾ ಮೂಲತಃ ಆಗ್ರಾದ ನಿವಾಸಿಯಾಗಿದ್ದು, ಡಿಎಲ್‌ಎಫ್ ಗುರ್ಗಾಂವ್‌ನಲ್ಲಿ ವಾಸಿಸುತ್ತಿದ್ದಾಗ ಖಾಸಗಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ.

ನಿನ್ನೆ ಸುಮಾರು 25 ವರ್ಷ ಪ್ರಾಯದ ಪತ್ನಿ ಲಕ್ಷ್ಮಿ ಶರ್ಮಾಳನ್ನು ಕೊಂದ ಬಳಿಕ ಆತ ಪರಾರಿಯಾಗಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಗುರ್ಗಾಂವ್‌ನ ಡಿಎಲ್‌ಎಫ್ 3 ನೇ ಹಂತದಲ್ಲಿರುವ ಪೊಲೀಸರು ಆತನಿಗಾಗಿ ಹುಡುಕುತ್ತಿದ್ದರು.

ದಂಪತಿಗೆ 2 ವರ್ಷದ ಮಗನಿದ್ದಾನೆ. ಮೂರು ವರ್ಷಗಳ ಹಿಂದೆ ಮನೆಯವರ ಒಪ್ಪಿಗೆ ಮೇರೆಗೆ ಅವರು ಮದುವೆಯಾಗಿದ್ದರು. ಮೃತನ ಯಾವುದೇ ಆತ್ಮಹತ್ಯೆ ಪತ್ರ ಕಂಡು ಬಂದಿಲ್ಲ.. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular