HomeIndiaBREAKING: ವಸತಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಘೋರ ದುರಂತ: ಇಬ್ಬರು ಮಕ್ಕಳು...

BREAKING: ವಸತಿ ಕಟ್ಟಡದಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿ ಘೋರ ದುರಂತ: ಇಬ್ಬರು ಮಕ್ಕಳು ಸೇರಿ 5 ಮಂದಿ ಸಾವು

ಗಾಜಿಯಾಬಾದ್: ಉತ್ತರ ಪ್ರದೇಶದ ಘಾಜಿಯಾಬಾದ್‌ನ ಲೋನಿ ಗಡಿ ಪ್ರದೇಶದ ಬೆಹ್ತಾ ಹಾಜಿಪುರ ಗ್ರಾಮದ ವಸತಿ ಕಟ್ಟಡದಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡು ಐವರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ಗಾಯಗೊಂಡಿದ್ದಾರೆ. ಮೃತಪಟ್ಟ ಐವರ ಪೈಕಿ ಇಬ್ಬರು ಮಕ್ಕಳು ಸೇರಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಮತ್ತು ಅಗ್ನಿಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದಾರೆ.

ಬೆಂಕಿ ಹೊತ್ತಿಕೊಂಡ ಬಳಿಕ ಮನೆಯಲ್ಲಿ ಮೂವರು ಮಕ್ಕಳು, ಇಬ್ಬರು ಮಹಿಳೆಯರು ಹಾಗೂ ಓರ್ವ ಬಾಲಕಿ ಸಿಲುಕಿಕೊಂಡಿದ್ದರು. ಅಗ್ನಿಶಾಮಕ ದಳದ ಸಿಬ್ಬಂದಿ ಐದು ಮೃತದೇಹಗಳನ್ನು ಹೊರತೆಗೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಹೆಚ್ಚುವರಿ ಪೊಲೀಸ್ ಕಮಿಷನರ್ ದಿನೇಶ್ ಪಿ. ಮಾಹಿತಿ ನೀಡಿದ್ದು, ಐದು ಜನರು ಸಾವನ್ನಪ್ಪಿದ್ದಾರೆ. ಮಹಿಳೆ ಮತ್ತು ಮಗುವಿಗೆ ಗಾಯಗಳಾಗಿವೆ, ಗಾಯಾಳುಗಳನ್ನು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ, ನೆಲ ಮಹಡಿಯಿಂದ ಮೇಲಿನ ಮಹಡಿಗೆ ಬೆಂಕಿ ವ್ಯಾಪಿಸಿದೆ ಎಂದು ತಿಳಿಸಿದ್ದಾರೆ.

ಶಾರ್ಟ್ ಸರ್ಕ್ಯೂಟ್‌ನಿಂದ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಶಾಮಕ ದಳದ ತಂಡ ರಕ್ಷಣಾ ಕಾರ್ಯ ನಡೆಸಿದ್ದು, ಕಿರಿದಾದ ರಸ್ತೆಗಳಲ್ಲಿ ಮನೆಗಳು ಇರುವುದರಿಂದ ಪರಿಹಾರ ಮತ್ತು ರಕ್ಷಣಾ ಕಾರ್ಯದಲ್ಲಿ ಅಗ್ನಿಶಾಮಕ ಸಿಬ್ಬಂದಿ ತೀವ್ರ ತೊಂದರೆ ಅನುಭವಿಸಬೇಕಾಯಿತು ಎನ್ನಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular