BREAKING: ಮುಂಬೈನಲ್ಲಿ ಭಾರೀ ಧೂಳಿನ ಬಿರುಗಾಳಿಗೆ ಬೃಹತ್ ಜಾಹೀರಾತು ಫಲಕ ಬಿದ್ದು 35 ಮಂದಿಗೆ ಗಾಯ | Viral Video

ಮುಂಬೈ: ಧೂಳಿನ ಬಿರುಗಾಳಿ ಮತ್ತು ಭಾರೀ ಮಳೆಯ ನಡುವೆ ಮುಂಬೈನ ಘಾಟ್‌ ಕೋಪರ್‌ ನಲ್ಲಿ ದೈತ್ಯ ಜಾಹೀರಾತು ಫಲಕ ಕುಸಿದು ಕನಿಷ್ಠ ಮೂವತ್ತೈದು ಜನರು ಗಾಯಗೊಂಡಿದ್ದಾರೆ.

ಪೊಲೀಸ್ ಗ್ರೌಂಡ್ ಪೆಟ್ರೋಲ್ ಪಂಪ್, ಈಸ್ಟರ್ನ್ ಎಕ್ಸ್‌ ಪ್ರೆಸ್ ಹೆದ್ದಾರಿ, ಪಂತ್‌ನಗರ, ಘಾಟ್‌ ಕೋಪರ್ ಪೂರ್ವದಲ್ಲಿ ಈ ಘಟನೆ ಸಂಭವಿಸಿದೆ ಮತ್ತು ಪ್ರಸ್ತುತ ಹೋರ್ಡಿಂಗ್ ಅಡಿಯಲ್ಲಿ ಸಿಕ್ಕಿಬಿದ್ದಿರುವವರನ್ನು ರಕ್ಷಿಸುವ ಪ್ರಕ್ರಿಯೆ ನಡೆದಿದೆ ಎಂದು ಬಿಎಂಸಿ ಅಧಿಕಾರಿಗಳು ತಿಳಿಸಿದ್ದಾರೆ.

ರಕ್ಷಣಾ ಕಾರ್ಯಾಚರಣೆಯು ವೇಗದಲ್ಲಿ ನಡೆಯುತ್ತಿದೆ. 100 ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದೆ. ಗಾಯಗೊಂಡವರನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ರಾಜವಾಡಿ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಿಂಚು, ಗುಡುಗು ಭಾರೀ ಗಾಳಿಯೊಂದಿಗೆ ಮಳೆಯಾಗಿದ್ದು, ಮುಂಬೈ ಮತ್ತು ಥಾಣೆ ಮತ್ತು ಪಾಲ್ಘರ್‌ನ ನೆರೆಹೊರೆಯ ಪ್ರದೇಶಗಳಿಗೆ ಅಪ್ಪಳಿಸಿದೆ. ಮುಂದಿನ 3-4 ಗಂಟೆಗಳಲ್ಲಿ ಪಾಲ್ಘರ್ ಮತ್ತು ಥಾಣೆ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗಂಟೆಗೆ 50-60 ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ಗುಡುಗು ಮಿಂಚು ಮತ್ತು ಸಾಧಾರಣದಿಂದ ತೀವ್ರ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read