ಪುನೀತ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಗಿಫ್ಟ್ ; ‘ಅಪ್ಪು’ ಚಿತ್ರ ರಿ ರಿಲೀಸ್..!

ಬೆಂಗಳೂರು : ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ 49 ನೇ ವರ್ಷದ ಹುಟ್ಟು ಹಬ್ಬಕ್ಕೆ ಜಾಕಿ ಚಿತ್ರ ಮರು ಬಿಡುಗಡೆ ಮಾಡಲಾಗಿದ್ದು, ಚಿತ್ರ ನೋಡಿದ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ.

ಹೌದು, ಪವರ್ ಸ್ಟಾರ್ ಪುನೀತ್ ಅಭಿನಯದ ಜಾಕಿ ಚಿತ್ರವನ್ನು ಮಾ.15 ರಂದು ರಿ ರಿಲೀಸ್ ಮಾಡಲಾಗಿದ್ದು, ಇದೀಗ ಮುಂದಿನ ವರ್ಷದ ಪುನೀತ್ ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ.

ಮುಂದಿನ ವರ್ಷ ಪುನೀತ್ ಅವರ 50 ನೇ ಹುಟ್ಟುಹಬ್ಬಕ್ಕೆ ‘ಅಪ್ಪು’ ಸಿನಿಮಾವನ್ನು ಮರು ಬಿಡುಗಡೆ ಮಾಡುವುದಕ್ಕೆ ಸಿದ್ದತೆ ನಡೆಸಲಾಗಿದೆ. ಈ ಬಗ್ಗೆ ಕೆಆರ್ ಜಿ ಸ್ಟುಡಿಯೋಸ್ ನ ಕಾರ್ತಿಕ್ ಗೌಡ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಕೆ ಆರ್ಜಿ ಸ್ಟುಡಿಯೋಸ್ ಮತ್ತು ಪಿಆರ್ಕೆ ಪ್ರೊಡಕ್ಷನ್ಸ್ ಜಂಟಿಯಾಗಿ ಅಪ್ಪು’ ಸಿನಿಮಾವನ್ನು ಮರುಬಿಡುಗಡೆ ಮಾಡಬೇಕೆಂದು ನಿರ್ಧರಿಸಿದ್ದೇವೆ ಎಂದು ಹೇಳಿದ್ದಾರೆ. ಈ ಮೂಲಕ ಪುನೀತ್ ಹುಟ್ಟುಹಬ್ಬಕ್ಕೆ ಅಭಿಮಾನಿಗಳಿಗೆ ಮತ್ತೊಂದು ಗಿಫ್ಟ್ ಸಿಕ್ಕಿದೆ.

ಅಪ್ಪು” 2002   ರಲ್ಲಿ ಬಿಡುಗಡೆಯಾದ ಕನ್ನಡ ಚಲನಚಿತ್ರವಾಗಿದೆ. ಈ ಚಲನಚಿತ್ರದಲ್ಲಿ ಪುನಿತ್ ರಾಜಕುಮಾರ್ ಹಾಗೂ ರಕ್ಷಿತಾ ಮುಖ್ಯ ಪಾತ್ರದಲ್ಲಿದ್ದಾರೆ ಜೊತೆಗೆ ಅವಿನಾಶ್,ಶ್ರೀನಿವಾಸ ಮೂರ್ತಿ, ಸುಮಿತ್ರಾ ಮುಂತಾದವರು ನಟಿಸಿದ್ದಾರೆ. “ಪೂರ್ಣಿಮಾ ಎಂಟರ್ಪ್ರೈಸಸ್” ಸಂಸ್ಥೆಯ ಲಾಂಛನದಲ್ಲಿ ಪಾರ್ವತಮ್ಮ ರಾಜ್ಕುಮಾರ್ ನಿರ್ಮಿಸಿದ್ದ ಈ ಚಿತ್ರಕ್ಕೆ ಪುರಿ ಜಗನ್ನಾಥ್ ನಿರ್ದೇಶಕರಾಗಿದ್ದಾರೆ. ಪುನಿತ್ ರಾಜಕುಮಾರ್ ಅವರು ಈ ಹಿಂದೆ ಹಲವಾರು ಚಿತ್ರಗಳಲ್ಲಿ ಬಾಲನಟರಾಗಿ ನಟಿಸಿದ್ದರೂ, ಯುವ ನಾಯಕ ನಟರಾಗಿ ಅಭಿನಯಿಸಿದ ಮೊದಲ ಚಿತ್ರವಾಗಿದೆ.”ಅಪ್ಪು” ಚಲನಚಿತ್ರದಲ್ಲಿ ಅವಿನಾಶ್,ಶ್ರೀನಿವಾಸ ಮೂರ್ತಿ, ಸುಮಿತ್ರಾ ಮುಂತಾದವರು ನಟಿಸಿದ್ದಾರೆ.

ಅಪ್ಪು ಚಲನಚಿತ್ರವು ಏಪ್ರಿಲ್ 26 2002 ರಲ್ಲಿ ಬಿಡುಗಡೆಯಾಗಿ, ಚಲನಚಿತ್ರ ಮಂದಿರಗಳಲ್ಲಿ 200 ದಿನಗಳ ಸತತ ಪ್ರದರ್ಶನ ಕಂಡಿತು

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read