BIG NEWS: ನರ್ಸ್ ಸೋಗಿನಲ್ಲಿ ಬಂದು ನವಜಾತ ಶಿಶು ಅಪಹರಣ ಪ್ರಕರಣ: ತಾಯಿ ಮಡಿಲು ಸೇರಿದ ಮಗು

ಕಲಬುರಗಿ: ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಒಂದು ದಿನದ ನವಜಾತ ಶಿಶು ಕಿಡ್ನ್ಯಾಪ್ ಪ್ರಕರಣ ಸುಖಾಂತ್ಯವಾಗಿದೆ. ಅಪಹರಣವಾಗಿದ್ದ ಮಗುವನ್ನು ಮರಳಿ ತಾಯಿ ಮಡಿಲು ಸೇರಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದ ಕಸ್ತೂರಿ ಎಂಬ ಮಹಿಳೆ ಜಿಮ್ಸ್ ಆಸ್ಪತ್ರೆಯಲ್ಲಿ ನ.25ರಂದು ಗಂಡು ಮಗುವಿಗೆ ಜನ್ಮ ನೀಡಿದ್ದರು. ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಮಗುವಿಗೆ ರಕ್ತ ತಪಾಸಣೆ ಮಾಡಿಸಬೇಕು ಎಂಬ ನೆಪದಲ್ಲಿ ಮಗುವನ್ನು ಎತ್ತಿಕೊಂಡವರು ಪರಾರಿಯಾಗಿದ್ದರು.

ಬ್ರಹ್ಮಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಬಗ್ಗೆ ವಿಶೇಷ ತನಿಖಾ ತಂಡ ರಚಿಸಲಾಗಿತ್ತು. ಇದೀಗ ಪೊಲೀಸರು ಅಪಹರಣಕ್ಕೊಳಗಾದ ಮಗುವನ್ನು ಪತ್ತೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಆರೋಪಿ ಮಹಿಳೆಯಯರಿಬ್ಬರನ್ನು ಬಂಧಿಸಿ ವಿಚಾರಣೆ ನಡೆಸಲಾಗುತ್ತಿದೆ.

ಇಂದು ಬೆಳಿಗ್ಗೆ ಕಮಿಷ್ನರ್ ಹಾಗೂ ಪೊಲೀಸ್ ಸಿಬ್ಬಂದಿ ಜಿಮ್ಸ್ ಆಸ್ಪತ್ರೆಗೆ ತೆರಳಿ ನವಜಾತ ಶಿಶುವನ್ನು ತಾಯಿ ಕಸ್ತೂರಿ ಮಡಿಲಿಗೆ ಸೇರಿಸಿದ್ದಾರೆ. ಕಿಡ್ನ್ಯಾಪ್ ಆಗಿದ್ದ ಮಗು ಮತ್ತೆ ಸಿಕ್ಕಿದ್ದು, ತಾಯಿ ಹಾಗೂ ಕುಟುಂಬದವರ ಸಂತಸಕ್ಕೆ ಪಾರವೇ ಇಲ್ಲದಂತಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read