ಬೆಂಗಳೂರು: ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಪ್ರಕರಣದ ಬಗ್ಗೆ ಮರು ತನಿಖೆ ನಡೆಸುವಂತೆ ಒತ್ತಾಯಿಸಿ ದಾಖಲೆ ಸಮೇತ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ದೂರು ನೀಡಿದ್ದಾರೆ.
ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣದಲ್ಲಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ಮರು ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಗೆ ಹಾಗೂ ಗೃಹ ಕಾರ್ಯದರ್ಶಿಗಳಿಗೆ ದೂರು ನೀಡಿದ್ದಾರೆ.
ಶಾಸಕರ ಭವನದ ಬಳಿ ಬಾಂಬ್ ಇಟ್ಟಿದ್ದ ಪ್ರಕರಣವನ್ನು ಮರು ತನಿಖೆ ನಡೆಸಬೇಕು ಹಾಗೂ ಎನ್ ಐಎ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿದ್ದಾರೆ. ತಾವೇ ಬಾಂಬ್ ತಯಾರಿಸಿ ಇಟ್ಟಿದ್ದಾಗಿ ಒಪ್ಪಿಕೊಂಡಿರುವ ರೀತಿಯಲ್ಲಿ ಗಿರೀಶ್ ಮಟ್ಟಣ್ಣವರ್ ಹಲವಾರು ವಿಡಿಯೋಗಳಲ್ಲಿ ಹೇಳಿಕೆ ನೀಡಿದ್ದರು. ಅವರ ಹೇಳಿಕೆಗಳು ಸ್ಪಷ್ಟವಾಗಿವೆ. ಕೇಸ್ ಈಗಾಗಲೇ ಕೋರ್ಟ್ ನಲ್ಲಿ ಖುಲಾಸೆಯಾಗಿದ್ದರೂ ಹೊಸ ಸಾಕಾಷ್ಯಾಧಾರಗಳ ಹಿನ್ನೆಲೆಯಲ್ಲಿ ಪುನಃ ತನಿಖೆ ನಡೆಸುವ ಅಗತ್ಯವಿವೆ ಎಂದು ಪ್ರಶಾಂತ್ ಸಂಬರಗಿ ದೂರಿನಲ್ಲಿ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಧರ್ಮಸ್ಥಳ ಬುರುಡೆ ಕೇಸ್ ಪ್ರಕರಣದ ಆರೋಪಿಗಳಲ್ಲೊಬ್ಬನಾದ ಗಿರೀಶ್ ಮಟ್ಟಣ್ಣವರ್ ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ.