HomeLatest NewsBIG NEWS: ಗಿರೀಶ್ ಮಟ್ಟಣ್ಣವರ್ ವಿರುದ್ಧ ಮತ್ತೊಂದು ಕೇಸ್ ದಾಖಲು

BIG NEWS: ಗಿರೀಶ್ ಮಟ್ಟಣ್ಣವರ್ ವಿರುದ್ಧ ಮತ್ತೊಂದು ಕೇಸ್ ದಾಖಲು

ಮಂಗಳೂರು: ಹೋರಾಟಗಾರ ಗಿರೀಶ್ ಮಟ್ಟಣ್ಣವರ್ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಠಾಣೆಯಲ್ಲಿ ಮತ್ತೊಂದು ಕೇಸ್ ದಾಖಲಾಗಿದೆ.

ಅಶ್ಲೀಲವಾಗಿ ಮಾತನಾಡಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಬಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗಿರೀಶ್ ಮಟ್ಟಣ್ಣವರ್ ವಿರುದ್ಧ ರಾಜೇಂದ್ರ ದಾಸ್ ಎಂಬುವವರು ದೂರು ನೀಡಿದ್ದು, ಈ ಹಿನ್ನೆಲೆಯಲ್ಲಿ ಬೆಳ್ತಂಗಡಿ ಠಾಣೆಯಲ್ಲಿ ಗಿರೀಶ್ ಮಟ್ಟಣ್ಣವರ್ ವಿರುದ್ಧ ಬಿಎನ್ ಎಸ್ ಕಾಯ್ದೆ 296ರಂತೆ ಪ್ರಕರಣ ದಾಖಲಾಗಿದೆ.

ಮಾನವ ಹಕ್ಕುಗಳ ಆಯೋಗದ ಅಧಿಕಾರಿ ಎಂದು ಸುಳ್ಳು ಹೇಳಿ ವ್ಯಕ್ತಿಯೊಬ್ಬರನ್ನು ತೋರಿಸಿದ ವಿಚಾರದಲ್ಲಿ ಈಗಾಗಲೇ ಮಟ್ಟಣ್ಣವರ್ ವಿರುದ್ಧ ಪ್ರಕರಣ ದಾಖಲಾಗಿದೆ. ಇದರ ಬೆನ್ನಲ್ಲೇ ಇದೀಗ ಮತ್ತೊಂದು ಕೇಸ್ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular