ಬಾತ್ ರೂಮ್ ನಲ್ಲಿ ಅನುಮಾನಾಸ್ಪದವಾಗಿ ವಿದ್ಯಾರ್ಥಿನಿ ಶವ ಪತ್ತೆ ಪ್ರಕರಣ; ನನ್ನ ಮಗಳನ್ನು ಭೀಕರವಾಗಿ ಕೊಲೆ ಮಾಡಲಾಗಿದೆ; ಪ್ರಭುಧ್ಯಾ ತಾಯಿ ಆರೋಪ

ಬೆಂಗಳೂರು: ಬೆಂಗಳೂರಿನ ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯ ಮನೆಯ ಬಾತ್ ರೂಮ್ ನಲ್ಲಿ ಕತ್ತುಕುಯ್ದ ರೀತಿಯಲ್ಲಿ ವಿದ್ಯಾರ್ಥಿನಿ ಪ್ರಭುಧ್ಯಾ ಶವ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಶೈಕ್ಷಣಿಕ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮಗಳನ್ನು ಹತ್ಯೆ ಮಾಡಲಾಗಿದೆ ಎಂದು ಯುವತಿ ತಾಯಿ ಆರೋಪಿಸಿದ್ದಾರೆ.

ಮಗಳ ಸಾವಿನಿಂದ ಕಂಗೆಟ್ಟಿರುವ ಪ್ರಭುಧ್ಯಾ ತಾಯಿ ಸೌಮ್ಯ, ನನ್ನ ಮಗಳನ್ನು ಭೀಕರವಾಗಿ ಕೊಲೆ ಮಾಡಿದ್ದಾರೆ. ಸೋಫಾ ಮೇಲೆ ಇಟ್ಟು ಹೋಗಿದ್ದ ಆಕೆಯ ಮೊಬೈಲ್ ಕೂಡ ನಾನು ಆಸ್ಪತ್ರೆಗೆ ಹೋಗಿ ಬರುವಷ್ಟರಲ್ಲಿ ಕಾಣೆಯಾಗಿದೆ. ಈ ವ್ಯವಸ್ಥೆಯನ್ನು ಪ್ರಶ್ನೆ ಮಾಡಿದ್ದಕ್ಕೆ ನನ್ನ ಮಗಳಿಗೆ ಈ ಸ್ಥಿತಿ ಬಂದಿದೆ ಎಂದು ಕಣ್ಣೀರಿಟ್ಟಿದ್ದಾರೆ.

ನನ್ನ ಮಗಳು ತುಂಬಾ ಧೈರ್ಯವಂತೆ. ಆತ್ಮಹತ್ಯೆ ಮಾಡಿಕೊಳ್ಳುವವಳಲ್ಲ. ಮನೆ ಹಿಂದಿನ ಡೋರ್ ತೆರೆದಿತ್ತು. ನನ್ನ ಮಗಳನ್ನು ಯಾರೋ ಕೊಲೆ ಮಾಡಿದ್ದಾರೆ. ಇಂದಿನ ಶೈಕ್ಷಣಿಕ ವ್ಯವಸ್ಥೆ ಸರಿಯಿಲ್ಲ ಎಂದು ಶೈಕ್ಷಿಣಿಕ ವ್ಯವಸ್ಥೆ ಬಗ್ಗೆ ಯಾವಗಾಲೂ ಪ್ರಶ್ನಿಸುತ್ತಿದ್ದಳು. ಇದೇ ಕಾರಣಕ್ಕೆ ಮಗಳನ್ನು ಹತ್ಯೆ ಮಡಲಾಗಿದೆ. ಮಗಳ ಸಾವಿಗೆ ನ್ಯಾಯ ಕೊಡಿ ಎಂದು ಗೋಗರೆದಿದ್ದಾರೆ.

ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ಓದುತ್ತಿದ್ದ ಪ್ರಭುಧ್ಯಾ ಮನೆಯ ಬಾತ್ ರೂಮ್ ನಲ್ಲಿ ಕತ್ತು ಕುಯ್ದ ರೀತಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read