HomeLatest NewsBREAKING : 'ಯಾದಗಿರಿ' ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಕೇಸ್ : ಪ್ರಮುಖ ಆರೋಪಿ...

BREAKING : ‘ಯಾದಗಿರಿ’ ವಸತಿ ಶಾಲೆಯ ಶೌಚಾಲಯದಲ್ಲಿ ವಿದ್ಯಾರ್ಥಿನಿಗೆ ಹೆರಿಗೆ ಕೇಸ್ : ಪ್ರಮುಖ ಆರೋಪಿ ಅರೆಸ್ಟ್.!

ಯಾದಗಿರಿ :  ಯಾದಗಿರಿ ವಸತಿ ಶಾಲೆಯ ಶೌಚಾಲಯದಲ್ಲಿ ಬಾಲಕಿಗೆ ಹೆರಿಗೆ ಆದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಕಿಯನ್ನು ಗರ್ಭಿಣಿ ಮಾಡಿದ ಆರೋಪಿಯನ್ನು  ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಆರೋಪಿ ಪರಮಣ್ಣ (30 ) ಎಂದು ಗುರುತಿಸಲಾಗಿದೆ. ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಆರೋಪಿ ಪರಮಣ್ಣ ಬಾಲಕಿ ಜೊತೆ ದೈಹಿಕ ಸಂಬಂಧ ಬೆಳೆಸಿ ಗರ್ಭಿಣಿ ಮಾಡಿದ್ದನು.

ಘಟನೆ ಹಿನ್ನೆಲೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯ ಶೌಚಾಲಯದಲ್ಲೇ 9ನೇ ತರಗತಿ ವಿದ್ಯಾರ್ಥಿನಿಗೆ ಹೆರಿಗೆಯಾಗಿತ್ತು. ಘಟನೆ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿದ್ದರು. ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿತ್ತು.
ಯಾದಗಿರಿ ಜಿಲ್ಲೆಯ ಶಹಾಪುರ ನಗರದ ವಸತಿ ಶಾಲೆಯ ಶೌಚಾಲಯದಲ್ಲಿ ಈ ಘಟನೆ ನಡೆದಿದೆ.. ಬಾಲಕಿ 9 ನೇ ತರಗತಿ ವ್ಯಾಸಂಗ ಮಾಡುತ್ತಿದ್ದಳು . ಶಾಲೆಯ ಶೌಚಾಲಯದಲ್ಲೇ ಬಾಲಕಿಗೆ ಹೆರಿಗೆ ಆಗಿದೆ . ಬಾಲಕಿಗೆ ಶೌಚಾಲಯದಲ್ಲೇ ಹೆರಿಗೆ ಆಗಿದ್ದು, ಗಂಡು ಮಗುವಿಗೆ ಜನ್ಮ ನೀಡಿದ್ದಳು. ಈ ಪ್ರಕರಣದಲ್ಲಿಆರೋಪಿಯ ಬಂಧನವಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular