HomeLatest Newsತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಕಾಮುಕನಿಗೆ ಜೀವಾವಧಿ ಶಿಕ್ಷೆ

ತಂದೆಯಿಂದಲೇ ಲೈಂಗಿಕ ದೌರ್ಜನ್ಯಕ್ಕೊಳಗಾಗಿ ಮಗುವಿಗೆ ಜನ್ಮ ನೀಡಿದ ಬಾಲಕಿ: ಕಾಮುಕನಿಗೆ ಜೀವಾವಧಿ ಶಿಕ್ಷೆ

ಕೊಪ್ಪಳ: ಹೆತ್ತ ಮಗಳ ಮೇಲೆಯೇ ಲೈಂಗಿಕ ದೌರ್ಜನ್ಯ ಎಸಗಿದ ತಂದೆಗೆ ಕೊಪ್ಪಳದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಹಾಗೂ 80 ಸಾವಿರ ರೂ. ದಂಡ ವಿಧಿಸಿದೆ.

ಕೊಪ್ಪಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ವ್ಯಕ್ತಿ ತನ್ನ 16 ವರ್ಷದ ಪುತ್ರಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ. 2020ರಲ್ಲಿ ನಡೆದ ಘಟನೆ ಬಗ್ಗೆ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ವಿಚಾರಣೆ ನಡೆಸಿದ ನ್ಯಾಯಾಧೀಶರಾದ ಕುಮಾರ ಡಿ.ಕೆ. ಅವರು ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ನೀಡಿದ್ದಾರೆ.

ಸರ್ಕಾರಿ ಅಭಿಯೋಜಕರಾದ ಗೌರಮ್ಮ ದೇಸಾಯಿ ಅವರು ವಾದ ಮಂಡಿಸಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಕರಣದ ತನಿಖಾಧಿಕಾರಿಗಳಾಗಿದ್ದ ಕೊಪ್ಪಳ ಗ್ರಾಮೀಣ ಠಾಣೆಯ ಸಿಪಿಐ ಸುರೇಶ್ ಡಿ. ಮತ್ತು ರವಿ ಉಕ್ಕುಂದ ಅವರು ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಸಂತ್ರಸ್ತ ಬಾಲಕಿಗೆ ಜನಿಸಿದ ಮಗುವನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಮೂಲಕ ದತ್ತು ಪ್ರಕ್ರಿಯೆಗೆ ಒಳಪಡಿಸಲಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular