ಬೆಳಗಾವಿ: ಮಕ್ಕಳ ರಕ್ಷಣಾ ಕೇಂದ್ರದಲ್ಲಿದ್ದ ಬಾಲಕಿಯನ್ನೇ ಕಿಡ್ನ್ಯಾಪ್ ಮಾಡಿರುವ ಗಹ್ಟನೆ ಬೆಳಗಾವಿ ಜಿಲ್ಲೆಯ ಮಾಳಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಪೋಕ್ಸೋ ಕೇಸ್ ಅಡಿ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿ, ಬಾಲಕಿಯನ್ನು ರಕ್ಷಿಸಿದ್ದಾರೆ. ಸಂತ್ರಸ್ತೆಯನ್ನು ಸೃಷ್ಠಿ ಮಕ್ಕಳ ರಕ್ಷಣಾ ಕೇಂದ್ರಕ್ಕೆ ಶಿಫ್ಟ್ ಮಾಡಲಾಗಿದೆ.
ಬಾಲಕಿ 13 ವರ್ಷವಿರುವಾಗ ಆರೋಪಿ ಜೊತೆ ವಿವಾಹವಾಗಿತ್ತು. ಅನಾರೋಗ್ಯದಿಂದ ಆಸ್ಪತ್ರೆಗೆ ತೆರಳಿದ್ದ ಬಾಲಕಿಯನ್ನು ಪರೀಕ್ಷಿಸಿದಾಗ ಆಕೆ ನಾಲ್ಕು ತಿಂಗಳ ಗರ್ಭಿಣಿ ಎಂಬುದು ಗೊತ್ತಾಗಿದೆ. ಬಳಿಕ ಬಾಲಕಿಯನ್ನು ಬೆಳಗಾವಿಯ ಮಹಾಂತೇಶ ನಗರದಲ್ಲಿರುವ ಮಕ್ಕಳ ರಕ್ಷಣಾ ಕೇಂದ್ರದಲ್ಲಿ ಇರಿಸಲಾಗಿತ್ತು. ಆದರೆ ಇಲ್ಲಿನ ಮಕ್ಕಳ ರಕ್ಷಣಾ ಕೇಂದ್ರದಲ್ಲಿ ಸಿಸಿಟಿವಿ ಕ್ಯಾಮರಾ ಆಗಲಿ, ಸೆಕ್ಯೂರಿಟಿ ಗಾರ್ಡ್ ಆಗಲಿ ಇರಲಿಲ್ಲ. ಮಕ್ಕಳ ರಕ್ಷಣಾ ಕೇಂದ್ರಕ್ಕೆ ತಾನು ಬಾಲಕಿಯ ಚಿಕ್ಕಪ್ಪ ಎಂದು ಹೇಳಿಕೊಂಡು ಬಂದಿದ್ದ ಆರೋಪಿ ಔಷಧಿ ಕೊಡುವ ನೆಪದಲ್ಲಿ ಬಾಲಕಿ ಬಳಿ ತೆರಳಿ ಚಾಕು ತೋರಿಸಿ ಆಕೆಯನ್ನು ಕಿಡ್ನ್ಯಾಪ್ ಮಾಡಿದ್ದಾನೆ.
ಮಕ್ಕಳ ರಕ್ಷಣಾ ಕೇಂದ್ರದ ಸಿಬ್ಬಂದಿ ಮಾಳಮಾರುತಿ ಠಾಣೆಯಲ್ಲಿ ದೂರು ನೀಡಿದ್ದರು. ಸದ್ಯ ಆರೋಪಿಯನ್ನು ಪತ್ತೆಹಚ್ಚಿರುವ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.