BIG NEWS: ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್; ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣು

ದಾವಣಗೆರೆ: ಸರ್ಕಾರಿ ಪದವಿ ಕಾಲೇಜಿನ ಕಟ್ಟಡದಲ್ಲಿ ಯುವಕ-ಯುವತಿ ಸರಸ ಸಲ್ಲಾಪದಲ್ಲಿ ತೊಡಗಿದ್ದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ಈ ಬೆಳವಣಿಗೆ ಬೆನ್ನಲ್ಲೇ ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

ದಾವಣಗೆರೆ ಜಿಲ್ಲೆಯ ಕಾಲೇಜೊಂದರ ಕಟ್ಟಡದಲ್ಲಿ ಯುವಕ-ಯುವತಿ ಯಾವ ಭಯ, ಅಂಜಿಕೆ ಇಲ್ಲದೇ ರಾಜಾರೋಷವಾಗಿ ಸರಸದಲ್ಲಿ ತೊಡಗಿದ್ದರು. ಇದನ್ನು ಎದುರಿನ ಕಾಲೇಜು ಕಟ್ಟಡದಿಂದ ಯಾರೋ ಮೊಬೈಲ್ ನಲ್ಲಿ ಚಿತ್ರೀಕರಿಸಿ ಜಾಲತಾಣಗಳಲ್ಲಿ ಹರಿಬಿಟ್ಟಿದ್ದರು. ಶುಕ್ರವಾರ ಬೆಳಿಗ್ಗೆಯಿಂದ ಸಂಜೆಯವರೆಗೂ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ವೈರಲ್ ಆಗಿದ್ದು, ಕಾಲೇಜಿನಲ್ಲಿಯೇ ಯುವಕ-ಯುವತಿಯ ಹುಚ್ಚಾಟ ಕಂಡು ಸಾರ್ವಜನಿಕ ಕಿಡಿ ಕಾರಿದ್ದಾರೆ.

ವಿಡಿಯೋ ಹರಿದಾಡುತ್ತಿರುವುದನ್ನು ಗಮನಿಸಿ ನೊಂದ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಕುರಿತು ಯಾವುದೇ ದೂರು ದಾಖಲಾಗಿಲ್ಲ. ವಿಡಿಯೋ ಹರಿ ಬಿಟ್ಟವರ ಬಗ್ಗೆ ಯಾರಾದರೂ ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು  ಪೊಲೀಸ್ ವರಿಷ್ಠಾಧಿಕಾರಿ ಡಾ.ಕೆ.ಅರುಣ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read