ಬೆಂಗಳೂರು ದಕ್ಷಿಣ: ಮನೆಗೆ ನುಗ್ಗಿದ ದುಷ್ಕರ್ಮಿಗಳು 14 ವರ್ಷದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಪರಾರಿಯಾಗಿರುವ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆಯ ತಾವರಕೆರೆ ಬಳಿ ನಡೆದಿದೆ.
ಅರುಣಾ (14) ಕೊಲೆಯಾದ ಬಾಲಕಿ. ಮನೆಯಲ್ಲಿ ತಂದೆ-ತಾಯಿ ಯಾರೂ ಇರದಿದ್ದ ವೇಳೆ ಏಕಾಏಕಿ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಬಾಲಕಿಯನ್ನು ಬರ್ಬರವಾಗಿ ಹತ್ಯೆಗೈದು ಎಸ್ಕೇಪ್ ಆಗಿದ್ದಾರೆ.
ಯಾವ ಕಾರಣಕ್ಕಾಗಿ ಬಾಲಕಿ ಹತ್ಯೆ ನಡೆದಿದೆ ಎಂಬುದು ತನಿಖೆಯಿಂದಷ್ಟೇ ತಿಳಿಯಬೇಕಿದೆ. ಪೋಷಕರು ಮನೆಗೆ ಬಂದು ನೋಡುವಷ್ಟರಲ್ಲಿ ಮಗಳು ಕೊಲೆಯಾಗಿದ್ದಳು. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ತನಿಖೆ ನಡೆಸಿದ್ದಾರೆ.