ಬಿಡದಿ: ಮೂಕ ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಬಾಲಕಿ ಕುಟುಂಬದವರು ಮಗಳ ಶವವನ್ನು ಮನೆ ಮುಂದೆ ಇಟ್ಟು ಪ್ರತಿಭಟನೆ ನಡೆಸಿದ್ದಾರೆ.
ರಾಮನಗರ ಜಿಲ್ಲೆಯ ಬಿಡದಿಯ ಭದ್ರಾಪುರ ಬಳಿ ಈ ಘಟನೆ ನಡೆದಿದೆ. ರೈಲ್ವೆ ಹಳಿ ಪಕ್ಕ ಅರೆನಗ್ನಾವಸ್ಥೆಯಲ್ಲಿ ಮೂರುದಿನಗಳ ಹಿಂದೆ ಬಾಲಕಿಯ ಶವ ಪತ್ತೆಯಾಗಿದ್ದು, ಕುಟುಂಬಸ್ಥರು ಆರೋಪಿಯನ್ನು ಬಂಧಿಸುವವರೆಗೂ ಶವಸಂಸ್ಕಾರ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಾತು ಬಾರದ, ಕಿವಿ ಕೇಳದ ಬಾಲಕಿ ಮೇಲೆ ಕಾಮುಕ ಅತ್ಯಾಚಾರವೆಸಗಿ, ಬಳಿಕ ಕೊಲೆ ಮಾಡಿದ್ದಾನೆ ಹಕ್ಕಿಪಿಕ್ಕಿ ಸಮುದಾಯದ ಮೃತ ಬಾಲಕಿ ತಾಯಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಂತಕನನ್ನು ಪೊಲೀಸರು ಬಂಧಿಸುವವರೆಗೂ ಬಾಲಕಿ ಶವ ಸಂಸ್ಕಾರ ಮಾಡುವುದಿಲ್ಲ ಎಂದು ಮನೆ ಮುಂದೆ ಶವವಿಟ್ಟು ಕುಟುಂಬದವರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಶವ ದುರ್ನಾತ ಬೀರುತ್ತಿದ್ದರೂ ಲೆಕ್ಕಿಸದೆ ಧರಣಿ ನಡೆಸುತ್ತಿದ್ದು, ಊರಿನ ಬಾಲಕಿಗೆ ಆಗಿರುವ ಅನ್ಯಾಯದ ವಿರುದ್ಧ ನ್ಯಾಯಕ್ಕಾಗಿ ಆಗ್ರಹಿಸಿ ಊರ ಜನರು ಕೂಡ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದಾರೆ.