ಮೈಸೂರು: 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ ಕಾಮುಕನನ್ನು ಗ್ರಾಮಸ್ಥರು ಹಿಡಿದು ಹಿಗ್ಗಾಮುಗ್ಗಾ ಥಳಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.
ಮೈಸೂರು ಜಿಲ್ಲೆಯ ಹುಣಸೂರು ತಾಲೂಕಿನಲ್ಲಿ ಈ ಘಟನೆ ನಡೆದಿದೆ. ಲೋಕೇಶ್ ಎಂಬಾತ ಡಿಸೆಂಬರ್ 3ರಂದು 9 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದ. ಈ ಬಗ್ಗೆ ಬಿಳಿಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿ ಇಂದು ಪೊಲೀಸರಿಗೆ ಶರಣಗಾಲು ಬರುತ್ತಿದ್ದ ವೇಳೆ ಆತನನ್ನು ಹಿಡಿದ ಗ್ರಾಮಸ್ಥರು ನಡುರಸ್ತೆಯಲ್ಲಿಯೇ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ಬಳಿಕ ಬಿಳಿಕೆರೆ ಠಾಣೆ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
