ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣದ ಬಗ್ಗೆ ವಿಶ್ವದಾದ್ಯಂತದ ರಾಮ ಭಕ್ತರಲ್ಲಿ ಉತ್ಸಾಹ ಕಂಡುಬರುತ್ತಿದೆ. ಜನವರಿ 22 ರಂದು ನಡೆಯಲಿರುವ ರಾಮ್ ಲಾಲಾ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮದ ಬಗ್ಗೆ ಪ್ರತಿಯೊಬ್ಬರೂ ತಮ್ಮದೇ ಆದ ರೀತಿಯಲ್ಲಿ ಆಚರಿಸುತ್ತಿದ್ದಾರೆ.
ಕೆಲವರು ರಾಮ ಮಂದಿರದ ಮಾದರಿಯನ್ನು ತಲೆಯ ಮೇಲೆ ಹೊತ್ತುಕೊಂಡು ತಿರುಗಾಡುತ್ತಿದ್ದರೆ, ಈಗ ಉತ್ತರ ಪ್ರದೇಶದ ಹುಡುಗಿಯೊಬ್ಬಳು ಬ್ಯಾಂಕಾಕ್ ನಲ್ಲಿ ಸ್ಕೈಡೈವಿಂಗ್ ಮಾಡುವ ಮೂಲಕ ರಾಮ ಮಂದಿರ ನಿರ್ಮಾಣದ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾಳೆ.
ಬ್ಯಾಂಕಾಕ್ ನಲ್ಲಿ 13,000 ಅಡಿ ಎತ್ತರದಿಂದ ‘ಜೈ ಶ್ರೀ ರಾಮ್’ ಧ್ವಜದೊಂದಿಗೆ ಸ್ಕೈಡೈವಿಂಗ್ ಮಾಡುವ ಮೂಲಕ ಪ್ರಯಾಗ್ರಾಜ್ ನಿವಾಸಿ 22 ವರ್ಷದ ಅನಾಮಿಕಾ ಶರ್ಮಾ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮ ಮಂದಿರದ ಬಗ್ಗೆ ತಮ್ಮ ಭಕ್ತಿಯನ್ನು ತೋರಿಸಿದ್ದಾರೆ. ನನ್ನ ಉದ್ದೇಶ ತುಂಬಾ ಸ್ಪಷ್ಟವಾಗಿದೆ ಎಂದು ಅನಾಮಿಕಾ ಶರ್ಮಾ ಹೇಳಿದರು. ನಾನು ನನ್ನ ಧರ್ಮ ಮತ್ತು ಸ್ಕೈಡೈವಿಂಗ್ ಅನ್ನು ಒಟ್ಟಿಗೆ ತೆಗೆದುಕೊಂಡು ಹೋಗಲು ಬಯಸುತ್ತೇನೆ, ಆದ್ದರಿಂದ ನಾನು ಇದನ್ನು ಮಾಡಿದ್ದೇನೆ ಎಂದು ಹೇಳಿದ್ದಾರೆ.
https://twitter.com/PTI_News/status/1742589067475157180?ref_src=twsrc%5Etfw%7Ctwcamp%5Etweetembed%7Ctwterm%5E1742589067475157180%7Ctwgr%5E93799b1683e351a4ab42cb89811d4809bf554344%7Ctwcon%5Es1_c10&ref_url=https%3A%2F%2Fapi-news.dailyhunt.in%2F
ಜನವರಿ 22ರಂದು ರಾಮ ಮಂದಿರ ಉದ್ಘಾಟನೆ
ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ಜನವರಿ 22 ರಂದು ಉದ್ಘಾಟಿಸಲಾಗುವುದು, ಅಲ್ಲಿ ಪ್ರಧಾನಿ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು 6,000 ಕ್ಕೂ ಹೆಚ್ಚು ಜನರು ಭವ್ಯ ‘ಪ್ರಾಣ ಪ್ರತಿಷ್ಠಾ’ ಸಮಾರಂಭದಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸೋನಿಯಾ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ ಸೇರಿದಂತೆ ರಾಜಕೀಯ ಪಕ್ಷಗಳ ಉನ್ನತ ನಾಯಕರನ್ನು ಆಹ್ವಾನಿಸಲಾಗಿದೆ.