HomeKarnatakaBREAKING NEWS: ಸಮುದ್ರಕ್ಕೆ ಜಿಗಿದು ಯುವತಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ರಕ್ಷಣೆ

BREAKING NEWS: ಸಮುದ್ರಕ್ಕೆ ಜಿಗಿದು ಯುವತಿ ಆತ್ಮಹತ್ಯೆಗೆ ಯತ್ನ: ಮೀನುಗಾರರಿಂದ ರಕ್ಷಣೆ

ಮಂಗಳೂರು: ಯುವತಿಯೊಬ್ಬಳು ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಸೋಮೇಶ್ವರದಲ್ಲಿ ನಡೆದಿದೆ.

ಸೋಮೇಶ್ವರದ ರುದ್ರಬಂಡೆಯಿಂದ ಯುವತಿ ಸಮುದ್ರಕ್ಕೆ ಜಿಗಿದಿದ್ದಾಳೆ. ಇದನ್ನು ಕಂಡ ಸ್ಥಳೀಯ ಮೀನುಗಾರರು ತಕ್ಷಣ ಯುವತಿಯನ್ನು ರಕ್ಷಿಸಿದ್ದಾರೆ.

ಯುವತಿ ಕಾಲೇಜು ವಿದ್ಯಾರ್ಥಿನಿ ಎಂದು ತಿಳಿದುಬಂದಿದೆ. ಮಂಗಳೂರಿನ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದಳು. ಯಾವ ಕಾರಣಕ್ಕಾಗಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಸದ್ಯ ಯುವತಿಯನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

For Latest News Updates, Join Our Whatsapp Community🚩
RELATED ARTICLES

Most Popular