ಮೆಡಿಕಲ್ ಕಾಲೇಜಿನ 20 ವಿದ್ಯಾರ್ಥಿನಿಯರ ಖಾಸಗಿ ಫೋಟೋ, ವಿಡಿಯೋ ಸೆರೆ: ತನಿಖೆ ಆರಂಭಿಸಿದ ಪೊಲೀಸರು

ಲಖ್ನೋ: ಗಾಜಿಪುರ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿನಿಯರು ಖಾಸಗಿ ಫೋಟೋ ಕ್ಲಿಕ್ಕಿಸಿದ ಬಗ್ಗೆ ಆರೋಪಿಸಿದ್ದು, ತನಿಖೆ ಕೈಗೊಳ್ಳಲಾಗಿದೆ ಎಂದು ಉತ್ತರ ಪ್ರದೇಶದ ಪೊಲೀಸರು ತಿಳಿಸಿದ್ದಾರೆ.

ಖಾಸಗಿ ಹಾಸ್ಟೆಲ್‌ನಲ್ಲಿ ಅದೇ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ಆಕ್ಷೇಪಾರ್ಹ ಛಾಯಾಚಿತ್ರಗಳು ಮತ್ತು ವೀಡಿಯೋಗಳನ್ನು ಚಿತ್ರೀಕರಿಸಿದ್ದಾಳೆ ಎಂದು ಜಿಲ್ಲೆಯ ವೈದ್ಯಕೀಯ ಕಾಲೇಜಿನ ಸುಮಾರು 20 ವಿದ್ಯಾರ್ಥಿನಿಯರ ಗುಂಪು ಆರೋಪಿಸಿದ ಆರೋಪದ ಮೇಲೆ ಗಾಜಿಪುರ ಪೊಲೀಸರು ತನಿಖೆ ಆರಂಭಿಸಿದ್ದಾರೆ. .

ಈ ಬಗ್ಗೆ ಪರಿಶೀಲಿಸಲು ಕಾಲೇಜಿನ ಪ್ರಾಧ್ಯಾಪಕರನ್ನು ಒಳಗೊಂಡ ದ್ವಿಸದಸ್ಯ ಸಮಿತಿಯನ್ನೂ ರಚಿಸಲಾಗಿದೆ ಎಂದು ಕಾಲೇಜು ಆಡಳಿತದ ಮೂಲಗಳು ತಿಳಿಸಿವೆ.

ಪೊಲೀಸ್ ಮತ್ತು ಕಾಲೇಜು ಆಡಳಿತಕ್ಕೆ ದೂರುದಾರರು ಲಿಖಿತ ದೂರು ನೀಡಿದ್ದು, ತಮ್ಮ ಒಪ್ಪಿಗೆಯಿಲ್ಲದೆ ಖಾಸಗಿ ಛಾಯಾಚಿತ್ರಗಳು ಮತ್ತು ವೀಡಿಯೊಗಳನ್ನು ಕಾಲೇಜಿನ ಪುರುಷ ವಿದ್ಯಾರ್ಥಿ ಹಂಚಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ. ಪ್ರಾಥಮಿಕ ವಿಚಾರಣೆಯ ಸಮಯದಲ್ಲಿ, ಆರೋಪಗಳನ್ನು ರುಜುವಾತುಪಡಿಸುವ ಯಾವುದೇ ಪುರಾವೆಗಳು ಇನ್ನೂ ಸಿಕ್ಕಿಲ್ಲ. ಈ ಸಂಬಂಧ ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ನ್ಯಾಯಯುತ ತನಿಖೆ ಖಚಿತಪಡಿಸಿಕೊಳ್ಳಲು ಕಾಲೇಜು ಪ್ರಾಂಶುಪಾಲರು ಆರು ತಿಂಗಳ ಕಾಲ ಇಬ್ಬರು ವಿದ್ಯಾರ್ಥಿಗಳನ್ನು(ಆರೋಪ ಎದುರಿಸುತ್ತಿರುವ ವಿದ್ಯಾರ್ಥಿನಿ ಮತ್ತು ಪುರುಷ ವಿದ್ಯಾರ್ಥಿ) ಅಮಾನತುಗೊಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪೊಲೀಸ್ ಮತ್ತು ಕಾಲೇಜು ಸಮಿತಿಯ ತನಿಖಾ ವರದಿಗಳ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು, ಆರೋಪಗಳು ಸುಳ್ಳು ಎಂದು ಕಂಡುಬಂದರೆ ಅಮಾನತು ರದ್ದುಗೊಳಿಸಲಾಗುವುದು ಎಂದು ಕಾಲೇಜು ಆಡಳಿತದ ಮೂಲಗಳು ತಿಳಿಸಿವೆ.

ಶನಿವಾರ ಮಹಿಳಾ ಸಿಬ್ಬಂದಿ ಸೇರಿದಂತೆ ಪೊಲೀಸ್ ತಂಡ ಕಾಲೇಜಿಗೆ ಆಗಮಿಸಿ ದೂರುದಾರರು ಹಾಗೂ ಅಮಾನತುಗೊಂಡ ಇಬ್ಬರು ವಿದ್ಯಾರ್ಥಿನಿಯರ ಹೇಳಿಕೆಗಳನ್ನು ವಿಡಿಯೋ ಚಿತ್ರೀಕರಿಸಿದೆ.

ಇನ್ನೂ ಯಾವುದೇ ಪುರಾವೆಗಳು ಕಂಡುಬಂದಿಲ್ಲ ಎಂದು ತಂಡವು ತಿಳಿಸಿದೆ. ತನಿಖಾ ವರದಿಯ ಆಧಾರದ ಮೇಲೆ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಗಾಜಿಪುರದ ಪೊಲೀಸ್ ವರಿಷ್ಠಾಧಿಕಾರಿ ಓಂ ವೀರ್ ಸಿಂಗ್ ತಿಳಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read