HomeKarnatakaBIG NEWS: ಅಪ್ರಾಪ್ತ ಬಾಲಕಿ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

BIG NEWS: ಅಪ್ರಾಪ್ತ ಬಾಲಕಿ ದುಡುಕಿನ ನಿರ್ಧಾರ: ವಿಷ ಸೇವಿಸಿ ಆತ್ಮಹತ್ಯೆಗೆ ಶರಣು

ಮಂಗಳೂರು: 17 ವರ್ಷದ ಅಪ್ರಾಪ್ತೆಯೊಬ್ಬಳು ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುವಕನೊಬ್ಬನ ಪ್ರೇಮ ಪಾಷಕ್ಕೆ ಸಿಲುಕಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.

ಮೃತಳ ಪೋಷಕ್ಲರು ತನ್ನ ಮಗಳ ಸಾವಿಗೆ ಪ್ರವೀಣ್ ಚಾರ್ಮಾಡಿ ಕಾರಣ ಎಂದು ಆರೋಪಿಸಿದ್ದಾರೆ. ಆತ ಮಗಳಿಗೆ ಮದುವೆಯಾಗುವುದಾಗಿ ನಂಬಿಸಿ ಮೋಸ ಮಾಡಿದ್ದಾನೆ. ಇದರಿಂದ ಮನನೊಂದು ವಾರದ ಹಿಂದೆ ಯುವತಿ ಇಲಿ ಪಾಷಾಣ ಸೇವಿಸಿದ್ದಳು. ತೀವ್ರ ಅಸ್ವಸ್ಥಳಾಗಿದ್ದ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ವಿರುದ್ಧ ಎಫ್ಐಆರ್ ದಾಖಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular