ಸೋರಿಕೆಯಾಯ್ತು ಖಾಸಗಿ ಫೋಟೋ: ದುಡುಕಿನ ನಿರ್ಧಾರ ಕೈಗೊಂಡ ವಿದ್ಯಾರ್ಥಿನಿ ಆತ್ಮಹತ್ಯೆ

ಕೌಶಂಬಿ: ಉತ್ತರ ಪ್ರದೇಶದ ಕೌಶಂಬಿಯಲ್ಲಿ ತನ್ನ ಖಾಸಗಿ ಫೋಟೋಗಳು ಆನ್‌ಲೈನ್‌ನಲ್ಲಿ ಸೋರಿಕೆ ಆಗಿದ್ದರಿಂದ 17 ವರ್ಷದ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಕೌಶಂಬಿ ಜಿಲ್ಲೆಯ ಹಳ್ಳಿಯೊಂದರಲ್ಲಿ ಘಟನೆ ನಡೆದಿದೆ. ಬಾಲಕಿ ತನ್ನ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾಳೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.

ಹುಡುಗಿಯ ಫೋಟೋಗಳನ್ನು ಆನ್‌ ಲೈನ್‌ನಲ್ಲಿ ಅಪ್‌ಲೋಡ್ ಮಾಡಿದ್ದಕ್ಕಾಗಿ ನೆರೆಮನೆಯ ಯುವಕನನ್ನು ಪ್ರಶ್ನಿಸಲು ಆಕೆಯ ಕುಟುಂಬ ಸದಸ್ಯರು ಆತನ ಮನೆಗೆ ಹೋಗಿದ್ದರು. ಆದರೆ ಅವರು ನಿಂದಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಮರ್ ಬಹದ್ದೂರ್ ಸಿಂಗ್ ಮಾತನಾಡಿ, ಈ ಸಂಬಂಧ ಕುಟುಂಬವು ಈ ಹಿಂದೆ ಪೊಲೀಸರಿಗೆ ದೂರು ನೀಡಿತ್ತು. ಪ್ರಮುಖ ಆರೋಪಿಯನ್ನು ಜೈ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ಬಾಲಕಿಗೆ ಕಿರುಕುಳ ನೀಡುತ್ತಿದ್ದ. ಹುಡುಗಿಯ ಕುಟುಂಬವು ಜೈ ಸಿಂಗ್ ಕುಟುಂಬವನ್ನು ಪ್ರಶ್ನಿಸಿದಾಗ, ಅವರು ನಿಂದಿಸಿ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರು ಆರು ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. IPC ಮತ್ತು POCSO ಕಾಯಿದೆಯ ವಿಭಾಗಗಳಡಿ ಕೇಸ್ ದಾಖಲಾಗಿದೆ. ಬಾಲಕಿಯ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಆರೋಪಿಯನ್ನು ಇನ್ನಷ್ಟೇ ಬಂಧಿಸಬೇಕಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read