HomeKarnatakaBIG NEWS: ಎಂ.ಕಾಂ ಪದವೀಧರೆಯ ದುಡುಕಿನ ನಿರ್ಧಾರ: ಮದುವೆಗೆ 13 ದಿನವಿರುವಾಗ ಯುವತಿ ಆತ್ಮಹತ್ಯೆ

BIG NEWS: ಎಂ.ಕಾಂ ಪದವೀಧರೆಯ ದುಡುಕಿನ ನಿರ್ಧಾರ: ಮದುವೆಗೆ 13 ದಿನವಿರುವಾಗ ಯುವತಿ ಆತ್ಮಹತ್ಯೆ

ಶಿವಮೊಗ್ಗ: ಮದುವೆ ನಿಶ್ಚಯವಾಗಿದ್ದ ಯುವತಿ, ಎಂ.ಕಾಂ ಪದವೀಧರೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನಲ್ಲಿ ನಡೆದಿದೆ.

ತೀರ್ಥಹಳ್ಳಿಯ ಕಟ್ಟೆಹಕ್ಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. 26 ವರ್ಷದ ಚೈತ್ರಾ ಆತ್ಮಹತ್ಯೆಗೆ ಶರಣಾದ ಯುವತಿ. ಫೆ.4ರಂದು ಚೈತ್ರಾಳ ಮದುವೆ ನಿಶ್ಚಯವಾಗಿತ್ತು. 13 ದಿನಗಳಲ್ಲಿ ಹಸೆಮಣೆಯೇರಬೇಕಿದ್ದ ಯುವತಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಕೊರಳೊಡ್ಡಿದ್ದಾಳೆ.

ಎಂ.ಕಾಂ ಪದವೀಧರೆಯಾಗಿದ್ದ ಚೈತ್ರಾ, ಆರೋಗ್ಯ ಸಮಸ್ಯೆಯಿಂದಲೂ ಬಳಲುತ್ತಿದ್ದಳು ಎನ್ನಲಾಗಿದೆ. ಮದುವೆಗೆ ಕೆಲವೇ ದಿನಗಳು ಬಾಕಿ ಇರುವಾಗ ಯುವತಿ ಆತ್ಮಹತ್ಯೆಗೆ ಶರಣಾಗಿದ್ದು, ಪೋಷಕರು ಕಂಗಾಲಾಗಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮರಣೋತ್ತರ ಪರೀಕ್ಷೆಗಾಗಿ ಯುವತಿಯ ಶವ ತಾಲೂಕು ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular