HomeKarnatakaBIG NEWS: ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ

BIG NEWS: ರೈಲಿಗೆ ತಲೆಕೊಟ್ಟು ಯುವತಿ ಆತ್ಮಹತ್ಯೆ

ಬೆಂಗಳೂರು: ಯುವತಿಯೋರ್ವಳು ಮನನೊಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸೋಲದೇವನಹಳ್ಳಿ ರೈಲ್ವೆ ನಿಲ್ದಾಣದ ಬಳಿ ನಡೆದಿದೆ.

ಡಾರ್ಜಿಲಿಂಗ್ ಮೂಲದ ಲಿಖಿತ ಜಾಸ್ಮೀನ್ (24) ಮೃತ ದುರ್ದೈವಿ. 10 ದಿನಗಳ ಹಿಂದೆ ತನ್ನ ಸಹೋದರಿ ಮನೆಗೆ ಬಂದಿದ್ದ ಲಿಖಿತ ಇಂದು ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾಳೆ.

ಎರಡು ವರ್ಷಗಳಿಂದ ಬಿಹಾರ ಮೂಲದ ಯುವಕನನ್ನು ಲಿಖಿತ ಪ್ರೀತಿಸುತ್ತಿದ್ದಳು. ಇತ್ತೀಚೆಗೆ ಇಬ್ಬರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವಾಗಿ ಬ್ರೇಕಪ್ ಆಗಿತ್ತು. ಇದರಿಂದ ಮನನೊಂದಿದ್ದ ಲಿಖಿತ, ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸಹೋದರಿ ಬಳಿ ಕಣ್ಣೀರಿಟ್ಟಿದ್ದಳು. ಲಿಖಿತಾ ಒಬ್ಬಳೇ ಇದ್ದರೆ ನೋವಿನಲ್ಲಿ ದುಡುಕಿನ ನಿರ್ಧಾರ ಮಾಡಬಹುದು ಎಂದು ಲಿಖಿತಾ ಅಕ್ಕ, ಬೆಂಗಳೂರಿನ ಸೋಲದೇವನಹಳ್ಳಿ ಬಳಿಯ ತನ್ನ ಮನೆಗೆ ಕರೆಸಿಕೊಂಡಿದ್ದಳು. ಕೆಲ ದಿನಗಳಿಂದ ಅಕ್ಕನ ಮನೆಯಲ್ಲಿದ್ದ ಲಿಖಿತಾ ಇಂದು ಬೆಳಿಗ್ಗೆ ಮನೆಯಿಂದ ಹೊರ ಹೋದವಳು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಶವಂತಪುರ ರೈಲ್ವೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

For Latest News Updates, Join Our Whatsapp Community🚩
RELATED ARTICLES

Most Popular