HomeLatest NewsBREAKING: ಹೊಸ ವರ್ಷದ ದಿನದಂದೇ ದುರಂತ: ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ಮನನೊಂದ ಬಾಲಕಿ ಆತ್ಮಹತ್ಯೆ

BREAKING: ಹೊಸ ವರ್ಷದ ದಿನದಂದೇ ದುರಂತ: ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ಮನನೊಂದ ಬಾಲಕಿ ಆತ್ಮಹತ್ಯೆ

ಬೆಂಗಳೂರು: ಹೊಸ ವರ್ಷದ ಸಂದರ್ಭದಲ್ಲೇ ಬಾಲಕಿಯೊಬ್ಬಳು ದುಡುಕಿನ ನಿರ್ಧಾರ ಕೈಗೊಂಡಿದ್ದಾಳೆ. ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ ಎಂದು ಮನನೊಂದು ಬಾಲಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಬೆಂಗಳೂರಿನ ಸಿ.ಕೆ ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಲೇಖನಾ (17) ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಬಾಲಕಿ. ಲೇಖನಾ ಹತ್ತನೆ ತರಗತಿ ಅನುತ್ತೀರ್ಣಳಾಗಿದ್ದಳು. ಮನೆಯಲ್ಲಿಯೇ ವಾಸವಾಗಿದ್ದಳು. ಕೌಟುಂಬಿಕ ಕಲಹದಿಂದಾಗಿ ತಂದೆ-ತಾಯಿ ದೂರಾಗಿದ್ದರು.

ತಂದೆ ಬೇರೆ ಕಡೆ ವಾಸವಾಗಿದ್ದರೆ, ಲೇಖನಾ ತಾಯಿ ಜೊತೆ ವಾಸವಾಗಿದ್ದಳು. ನನಗೆ ತಂದೆ-ತಾಯಿ ಪ್ರೀತಿ ಸಿಗುತ್ತಿಲ್ಲ. ಒಂಟಿ ಭಾವನೆ ಕಾಡುತ್ತಿದೆ. ನನ್ನ ಸಾವಿಗೆ ನಾನೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಕೊರಳೊಡ್ಡಿದ್ದಾಳೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿ.ಕೆ.ಅಚ್ಚುಕಟ್ಟು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular