HomeKarnatakaಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು, ಆಮಿಷಕ್ಕೆ ಬಲಿಯಾಗಬಾರದು

ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು, ಆಮಿಷಕ್ಕೆ ಬಲಿಯಾಗಬಾರದು

ಶಿವಮೊಗ್ಗ : ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು ಹಾಗೂ ಎಚ್ಚರಿಕೆಯಿಂದ ಮೊಬೈಲ್ ಬಳಸಬೇಕು. ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು ಎಂದು ಜಿಲ್ಲಾ ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ ಹೇಳಿದರು.

ಜಿಲ್ಲಾಡಳಿತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಜಿಲ್ಲಾ ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಸಾರ್ವಜನಿಕ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಇಂದು ಬೆಳಿಗ್ಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಬಾಲಕಾರ್ಮಿಕ ಪದ್ದತಿ ವಿರೋಧಿ ದಿನಾಚರಣೆಯಲ್ಲಿ ಮಾತನಾಡಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯಾವುದೇ ಶಾಲೆ ಬಿಟ್ಟ ಮಕ್ಕಳು ಕಂಡುಬಂದಲ್ಲಿ ಮಕ್ಕಳು ಸೇರಿದಂತೆ ಯಾರೇ ಆಗಲಿ ಮಕ್ಕಳ ಸಹಾಯವಾಣಿ 1098 ಗೆ ಕರೆ ಮಾಡಿ ತಿಳಿಸಬೇಕು. ಆಗ ಮಕ್ಕಳನ್ನು ರಕ್ಷಿಸಿ ಮುಖ್ಯವಾಹಿನಿಗೆ ತರಲು ಸಹಕಾರಿಯಾಗುತ್ತದೆ. ಮಕ್ಕಳು ಮೊಬೈಲ್ ಬಳಕೆ ಕಡಿಮೆ ಮಾಡಬೇಕು. ಹಾಗೂ ಎಚ್ಚರಿಕೆಯಿಂದ ಮೊಬೈಲ್ ಬಳಸಬೇಕು. ಹೆಣ್ಣುಮಕ್ಕಳು ಗುಡ್ ಮತ್ತು ಬ್ಯಾಡ್ ಟಚ್ ಬಗ್ಗೆ ತಿಳಿದಿರಬೇಕು. ಯಾವುದೇ ಆಮಿಷಗಳಿಗೆ ಬಲಿಯಾಗದೇ ಶಿಕ್ಷಣಕ್ಕೆ ಹೆಚಿನ್ಚ ಮಹತ್ವ ನೀಡಬೇಕೆಂದರು.

ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಬಿ.ಜಿ.ಶಿವಮೂರ್ತಿ ಮಾತನಾಡಿ, ಪೋಷಕರು ಮಕ್ಕಳ ಶಿಕ್ಷಣದ ಕಡೆ ಹೆಚ್ಚಿನ ಒತ್ತು ನೀಡಬೇಕು. ಹಾಗೂ ಮಕ್ಕಳ ವಿಚಾರದಲ್ಲಿ ಹೆಚ್ಚಿನ ಜವಾಬ್ದಾರಿಯಿಂದ ನಡೆದುಕೊಂಡು ಅವರಿಗೆ ಉತ್ತಮ ವಾತಾವರಣ ನೀಡಬೇಕೆಂದರು.

ಮಕ್ಕಳ ವಿಚಾರದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು

ಮಕ್ಕಳ ವಿಚಾರದಲ್ಲಿ ಎಲ್ಲರೂ ಜವಾಬ್ದಾರಿಯಿಂದ ನಡೆದುಕೊಳ್ಳಬೇಕು. ಶಾಲೆ ಬಿಟ್ಟ ಮಕ್ಕಳ ಕಡೆ ಗಮನ ಹರಿಸಿ ಮುಖ್ಯವಾಹಿನಿಗೆ ತರುವ ಕೆಲಸ ಆಗಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ ನಾಯಕ್ ತಿಳಿಸಿದರು.

ಬಾಲ ಕಾರ್ಮಿಕ ಪದ್ದತಿ ಒಂದು ಅಂತರಾಷ್ಟ್ರೀಯ ಪಿಡುಗು. ಬಡತನ, ಶಿಕ್ಷಣ ಸೌಲಭ್ಯದ ಕೊರತೆ, ಪೋಷಕರ ಅನಾರೋಗ್ಯ ಇನ್ನೂ ಹಲವಾರು ಕಾರಣಗಳಿಂದ ಬಾಲ ಕಾರ್ಮಿಕತೆ ಹೆಚ್ಚುತ್ತಿದೆ. ಕೆಲವೆಡೆ ಪ್ರೌಢಶಾಲೆಗಳು ಇಲ್ಲ, ಇನ್ನು ಕೆಲವೆಡೆ ಪೋಷಕರು ತಮ್ಮ ಅನಾರೋಗ್ಯ, ಬಡತನದಿಂದ ಮಕ್ಕಳನ್ನು ಕೆಲಸಕ್ಕೆ ಸೇರಿಸುವುದು, ಕೆಲ ಕೈಗಾರಿಕೆಗಳು ಆಮಿಷ ತೋರಿ ಮಕ್ಕಳನ್ನು ಕೆಲಸಕ್ಕೆ ಸೇರಿಸಿಕೊಳ್ಳುತ್ತಿರುವುದನ್ನು ಕಾಣುತ್ತಿದ್ದೇವೆ.
ದೇಶ ಸೇವೆ, ತಂತ್ರಜ್ಞಾನ ಸೇರಿದಂತೆ ಹಲವಾರು ಕ್ಷೇತ್ರಗಳಲ್ಲಿ ಅಭಿವೃದ್ದಿಯನ್ನು ಕಾಣುತ್ತಿದೆ ಎನ್ನಲಾಗುತ್ತಿದೆ. ಆದರೆ ಬಾಲ ಕಾರ್ಮಿಕತೆ ಜಾರಿ ಇರುವೆಡೆ ಅಭಿವೃದ್ದಿ ಎನ್ನಲು ಸಾಧ್ಯವಿಲ್ಲ. ಇದನ್ನು ತೊಡೆದುಹಾಕಲು ಅನೇಕ ಕಾರ್ಯಕ್ರಮಗಳು, ಕಾಯ್ದೆಗಳನ್ನು ಜಾರಿಗೆ ತರಲಾಗಿದೆ. ಆದರೆ ಕೇವಲ ಕಾಯ್ದೆಯಿಂದ ಮಾತ್ರ ಈ ಪಿಡುಗಿನ ನಿವಾರಣೆ ಸಾಧ್ಯವಿಲ್ಲ. ನಮ್ಮ ಮನಸ್ಥಿತಿ ಬದಲಾಯಿಸಿಕೊಳ್ಳಬೇಕು ಎಂದರು.

ಶಾಲೆಯನ್ನು ಅರ್ಧಕ್ಕೆ ಬಿಟ್ಟವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಿದೆ. ಕೇವಲ ನಗರದಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಗಮನಿಸಿದರೆ ಸಾಲದು, ಹಳ್ಳಿಗಳಲ್ಲಿ ಶಾಲೆ ಬಿಟ್ಟ ಮಕ್ಕಳನ್ನು ಕೃಷಿ ಕ್ಷೇತ್ರದಲ್ಲಿ ತೊಡಗಿಸಿರುವುದು ಆತಂಕಕಾರಿಯಾಗಿದ್ದು, ಇಂತಹ ಮಕ್ಕಳ ಕಡೆ ಗಮನ ಹರಿಸಿ ಅವರನ್ನು ಶಿಕ್ಷಣದಲ್ಲಿ ಮುಂದುವರೆಸಬೇಕು. ಉದ್ಯಮಿಗಳು, ಹೋಟೆಲ್ ಮಾಲೀಕರು, ಇತರೆ ಉದ್ದೆಮೆ ಮತ್ತು ಕೃಷಿ ಮಾಲೀಕರು ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಬಾರದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular