HomeLatest Newsವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನು ರಕ್ಷಿಸಿದ ಪೊಲೀಸರು

ಬೆಂಗಳೂರು: ಸಾಮಾನ್ಯವಾಗಿ ಪೊಲೀಸರು ಅವಘಡ, ಅನಾಹುತ ನಡೆದ ಮೇಲೆಯೇ ಬರುತ್ತಾರೆ. ಎಲ್ಲವೂ ಮುಗಿದ ಮೇಲೆ ಪೊಲೀಸರು ಬರುತ್ತಾರೆ ಎಂಬ ಮಾತಿದೆ. ಆದರೆ ಇಲ್ಲೊಂದು ಘಟನೆಯಲ್ಲಿ ಅನಾಹುತ ನಡೆಯುವುದನ್ನು ಪೊಲೀಸರು ತಪ್ಪಿಸುವ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯನ್ನು ಸಮಯಪ್ರಜ್ಞೆ ಮೆರೆದು ಪೊಲೀಸರು ಆಕೆಯ ಜೀವ ರಕ್ಷಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯ ಬಸವನಪುರದಲ್ಲಿ ಈ ಘಟನೆ ನಡೆದಿದೆ.

ಪಶ್ಚಿಮ ಬಂಗಾಳ ಮೂಲದ ಯುವತಿ ಮನೆಯಲ್ಲಿ ವಿಷಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ವಿಷ ಸೇವಿಸಿದ ಬಳಿಕ ಯುವತಿ ತನ್ನ ತಂದೆಗೆ ಕರೆ ಮಾಡಿದ್ದಾಳೆ. ಆತಂಕಗೊಂಡ ತಂದೆ ತಕ್ಷಣ 112ಗೆ ಕರೆ ಮಾಡಿದ್ದಾರೆ. ತಕ್ಷಣ ಕೋಣನಕುಂಟೆ ಠಾಣೆ ಹೊಯ್ಸಳ ಪೊಲೀಸರು ಕಾರ್ಯಪ್ರವೃತ್ತರಾಗಿದ್ದಾರೆ. ಘಟನಾ ಸ್ಥಳಕ್ಕೆ ತೆರಳಿದ ಪೊಲೀಸರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಯುವತಿಯನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಯುವತಿ ಪ್ರಾಣಾಪಾಯದಿಂದ ಪಾರಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ. ಪೊಲೀಸರ ಸಮಯಪ್ರಜ್ಞೆಯಿಂದ ಯುವತಿ ಬದುಕುಳಿದ್ದು, ಜನರಿಂದ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular