HomeKarnatakaBIG NEWS: ಗೀತಂ ವಿಶ್ವವಿದ್ಯಾಲಯದಲ್ಲಿ ಮತ್ತೊಂದು ದುರಂತ: ಹಾಸ್ಟೇಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದ ಸಾವು

BIG NEWS: ಗೀತಂ ವಿಶ್ವವಿದ್ಯಾಲಯದಲ್ಲಿ ಮತ್ತೊಂದು ದುರಂತ: ಹಾಸ್ಟೇಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿ ಅನುಮಾನಾಸ್ಪದ ಸಾವು

ದೇವನಹಳ್ಳಿ: ಹಾಸ್ಟೆಲ್ ಮಹಡಿಯಿಂದ ಬಿದ್ದು ವಿದ್ಯಾರ್ಥಿಯೋರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ನಾಗದೇವನಹಳ್ಳಿಯ ಗೀತಂ ವಿಶ್ವವಿದ್ಯಾಲಯದಲ್ಲಿ ನಡೆದಿದೆ.

ಆಂಧ್ರದ ಕರ್ನೂಲ್ ಮೂಲದ ದಾಸರಿ ಬ್ರಹ್ಮಸಾಯಿರೆಡ್ಡಿ ಮೃತ ವಿದ್ಯಾರ್ಥಿ. ಹಾಸ್ಟೇಲ್ ನಲ್ಲಿ ನಿನ್ನೆ ರತರಿ ಊಟ ಮಾಡಿದ ಬಳಿಕ ಮಹಡಿ ಮೇಲೆ ತೆರಳಿದ್ದ. ಈ ವೇಳೆ ಏಕಾಏಕಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎಂದು ಹೆಳಲಾಗುತ್ತಿದೆ. ಆದರೆ ವಿದ್ಯಾರ್ಥಿ ಸಾವು ಅನುಮನಕ್ಕೆ ಕಾರಣವಾಗಿದೆ.

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ದಾಸರಿ ಬ್ರಹ್ಮಸಾಯಿರೆಡ್ಡಿ ಮೊದಲ ವರ್ಷದ ಬಿಟೆಕ್ ಓದುತ್ತಿದ್ದ. ಊಟ ಮಾಡಿ ಮಹಡಿ ಮೇಲೆ ಹೋದವನು ಕೆಳಗೆ ಬಿದ್ದು ಸಾವನ್ನಪ್ಪಿದ್ದಾನೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ಸಾಲು ಸಾಲು ಆತ್ಮಹತ್ಯೆ ಪ್ರಕರಣ ಇತ್ತೀಚೆಗೆ ಬೆಳಕಿಗೆ ಬಂದಿದೆ. ಕಳೆದ ನಾಲ್ಕು ತಿಂಗಳಲ್ಲಿ ಮೂವರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾವಿಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದಷ್ಟೆ ತಿಳಿಯಬೇಕಿದೆ.

For Latest News Updates, Join Our Whatsapp Community🚩
RELATED ARTICLES

Most Popular