‘ನಮಗೆ ನಮ್ಮ ನ್ಯಾಯಯುತ ತೆರಿಗೆ ಪಾಲನ್ನು ಕೊಡಿ’ ; ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹ

ಬೆಂಗಳೂರು : ನಮಗೆ ನಮ್ಮ ನ್ಯಾಯಯುತ ತೆರಿಗೆ ಪಾಲನ್ನು ಕೊಡಿ ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಿಗೆ ಅನುದಾನ ಕೊಡಿ ಎಂದು ಕೇಂದ್ರ ಬಿಜೆಪಿ ಸರ್ಕಾರವನ್ನು ನಾವು ಕೇಳಿಲ್ಲ. ಈ ಯೋಜನೆಗಳಿಗೆ ಬೇಕಾದ ಅನುದಾನವನ್ನು ಬಜೆಟ್ನಲ್ಲಿಯೇ ಮೀಸಲಿಟ್ಟಿದ್ದೇವೆ. ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರೇ, ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಘೋರ ಅನ್ಯಾಯವಾಗಿದೆ, ನಮಗೆ ನಮ್ಮ ನ್ಯಾಯಯುತ ತೆರಿಗೆ ಪಾಲನ್ನು ಕೊಡಿ ಎಂದು ಏಳು ಕೋಟಿ ಕನ್ನಡಿಗರ ಪರವಾಗಿ ಕೇಳುತ್ತಿದ್ದೇನೆ ಎಂದು ಕೇಂದ್ರ ಸರ್ಕಾರಕ್ಕೆ ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಸರ್ಕಾರ ಇದೆ ಎನ್ನುವ ಏಕೈಕ ಕಾರಣಕ್ಕೆ ಈ ಎರಡೂ ಶಿಫಾರಸುಗಳನ್ನು ವಿತ್ತ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ತಿರಸ್ಕರಿಸಿದ್ದಾರೆ. ಈ ಮೂಲಕ ಕರ್ನಾಟಕವನ್ನು ನ್ಯಾಯಯುತ ಪಾಲಿನ ಹಕ್ಕಿನಿಂದ ವಂಚಿತರನ್ನಾಗಿಸಿದರು. ಇದು ರಾಜ್ಯದ ಆರುವರೆ ಕೋಟಿ ಕನ್ನಡಿಗರಿಗೆ ಬಗೆದಿರುವ ದ್ರೋಹವಾಗಿದೆ. ಕಣ್ಣೆದುರೇ ದಾಖಲೆಗಳಿದ್ದರೂ ಸ್ವಲ್ಪವೂ ಅಂಜಿಕೆಯಿಲ್ಲದೆ ಕೇಂದ್ರ ವಿತ್ತ ಸಚಿವರು ಹಸಿ ಹಸಿ ಸುಳ್ಳುಗಳನ್ನು ಹೇಳಿ ಜನರ ದಾರಿ ತಪ್ಪಿಸುವ ಹತಾಶ ಪ್ರಯತ್ನ ನಡೆಸುತ್ತಿದ್ದಾರೆ. ಕನ್ನಡಿಗರ ಎದುರು ಕೇಂದ್ರ ಸರ್ಕಾರದ ಸುಳ್ಳಿನ ಪರದೆ ಕಳಚಿ ಬಿದ್ದು ನಿಜ ಬಣ್ಣ ಬಯಲಾಗಿ ಬಹಳಾ ಕಾಲ ಆಗಿದೆ. ಇನ್ನಾದರೂ ಸತ್ಯ ಒಪ್ಪಿಕೊಂಡು ಆಗಿರುವ ಅನ್ಯಾಯ ಸರಿಪಡಿಸುವ ಪ್ರಯತ್ನ ಮಾಡಿ. ಕೇಂದ್ರ ಸಚಿವ ಸಂಪುಟದಲ್ಲಿ ಸಚಿವರಾಗಿರುವ ನಿರ್ಮಲಾ ಸೀತಾರಾಮನ್ ಅವರು ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ನಡುವಿನ ಸಂಬಂಧದ ಬಗ್ಗೆ ಈ ರೀತಿಯ ಅಜ್ಞಾನ ಹೊಂದಿರುವುದು ವಿಷಾದನೀಯ ಎಂದಿದ್ದಾರೆ.

ತೆರಿಗೆ ಹಂಚಿಕೆಯಲ್ಲಿ ಕೇಂದ್ರ ಬಿಜೆಪಿ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿರುದ್ಧ ಸಿಡಿದೆದ್ದಿರುವ ಕನ್ನಡಿಗರ ಕೂಗಿಗೆ ರಾಜ್ಯ ಸರ್ಕಾರ ದನಿಯಾಗಿದೆ, ಇದು ಜವಾಬ್ದಾರಿಯುತ ಸರ್ಕಾರದ ಕರ್ತವ್ಯವೂ ಹೌದು. ಅನ್ಯಾಯ ನಡೆದಿರುವ ಕಾರಣಕ್ಕಾಗಿಯೇ 2020-21ರಲ್ಲಿ 15ನೇ ಹಣಕಾಸು ಆಯೋಗವು ತನ್ನ ಮಧ್ಯಂತರ ವರದಿಯಲ್ಲಿ ಕರ್ನಾಟಕವೂ ಸೇರಿದಂತೆ 3 ರಾಜ್ಯಗಳಿಗೆ ವಿಶೇಷ ಅನುದಾನ ₹ 6,764 ಕೋಟಿ (ರಾಜ್ಯಕ್ಕೆ ₹5,495 ಕೋಟಿ, ತೆಲಂಗಾಣಕ್ಕೆ ₹723 ಕೋಟಿ ಹಾಗೂ ಮಿಜೋರಾಂಗೆ ₹546 ಕೋಟಿ) ಶಿಫಾರಸು ಮಾಡಿತ್ತು. ಕರ್ನಾಟಕಕ್ಕೆ ಮಾತ್ರವಲ್ಲ ತೆಲಂಗಾಣ ಮತ್ತು ಮಿಜೋರಾಂಗಳಿಗೂ ತೆರಿಗೆ ಹಂಚಿಕೆಯಲ್ಲಿ ಅನ್ಯಾಯವಾಗಿತ್ತು. 15ನೇ ಹಣಕಾಸು ಆಯೋಗದ ಅಂತಿಮ ವರದಿಯಲ್ಲಿ ಕೂಡ ಕರ್ನಾಟಕಕ್ಕೆ ₹6,000 ಕೋಟಿ ಇದರಲ್ಲಿ ರೂ.3,000 ಕೋಟಿ ಜಲಮೂಲಗಳ ಸಂರಕ್ಷಣೆ ಹಾಗೂ ₹3,000 ಕೋಟಿ ಬೆಂಗಳೂರಿನ ಫೆರಿಪೆರಲ್ ರಿಂಗ್ ರಸ್ತೆ ನಿರ್ಮಾಣಕ್ಕೆ ನೀಡುವಂತೆ ಶಿಫಾರಸು ಮಾಡಿತ್ತು. ಇದು ನಮ್ಮ ಮೇಲಿನ ವಿಶೇಷ ಪ್ರೀತಿ ಇಲ್ಲವೇ ಔದಾರ್ಯದಿಂದ ಮಾಡಿರುವ ಶಿಫಾರಸುಗಳಲ್ಲ. ಇವೆಲ್ಲವೂ ತೆರಿಗೆ ಹಂಚಿಕೆಯಲ್ಲಿನ ಅನ್ಯಾಯಕ್ಕೆ ನೀಡಿರುವ ಪರಿಹಾರ ಅಷ್ಟೆ ಎಂದರು.

https://twitter.com/siddaramaiah/status/1772214188670062601

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read