HomeEntertainment'ದೇವರ' ಚಿತ್ರದ ಗ್ಲಿಂಪ್ಸ್ ವಿಡಿಯೋ ರಿಲೀಸ್

‘ದೇವರ’ ಚಿತ್ರದ ಗ್ಲಿಂಪ್ಸ್ ವಿಡಿಯೋ ರಿಲೀಸ್

ಕೊರಟಾಲ ಶಿವ ನಿರ್ದೇಶನದ ಜೂನಿಯರ್ ಎನ್ಟಿಆರ್ ಅಭಿನಯದ ಬಹುನಿರೀಕ್ಷಿತ ‘ದೇವರ’ ಚಿತ್ರದ ಗ್ಲಿಂಪ್ಸ್ ವಿಡಿಯೋ ಒಂದನ್ನು ಯುವಸುಧಾ ಆರ್ಟ್ಸ್ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಮಾಡಲಾಗಿದ್ದು‌, ಸಾಕಷ್ಟು ವೀಕ್ಷಣೆ ಪಡೆದಿದೆ.

ನಂದಮೂರಿ ತಾರಕ್ ರಾಮ್ ರಾವ್ ಆರ್ಟ್ಸ್ ಮತ್ತು ಯುವ ಸುಧಾ ಆರ್ಟ್ಸ್ ಬ್ಯಾನರ್ ನಲ್ಲಿ ಸುಧಾಕರ್ ಹಾಗೂ  ಹರಿಕೃಷ್ಣ ಈ ಸಿನಿಮಾ ನಿರ್ಮಾಣ ಮಾಡಿದ್ದು, ಅನಿರುದ್ ರವಿಚಂದರ್ ಸಂಗೀತ ಸಂಯೋಜನೆ ನೀಡಿದ್ದಾರೆ.

ನಂದಮೂರಿ ತಾರಕ್ ರಾಮ್  ಸೇರಿದಂತೆ ಸೈಫ್ ಅಲಿ ಖಾನ್, ಜಾನ್ವಿ ಕಪೂರ್, ಪ್ರಕಾಶ್ ರಾಜ್, ಶ್ರೀಕಾಂತ್ ತೆರೆ ಹಂಚಿಕೊಂಡಿದ್ದು, ಶೇಖರ್ ಪ್ರಸಾದ್ ಅವರ ಸಂಕಲನ ರತ್ನವೇಲು ಛಾಯಾಗ್ರಹಣವಿದೆ. ಏಪ್ರಿಲ್ 5 ರಂದು ಈ ಸಿನಿಮಾ ತೆಲುಗು ಸೇರಿದಂತೆ ಕನ್ನಡ, ತಮಿಳು, ಮಲಯಾಳಂ, ಹಾಗೂ ಹಿಂದಿ ಭಾಷೆಯಲ್ಲಿ ತೆರೆ ಕಾಣಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular