HomeIndiaBIG NEWS: ಗ್ಲೌಸ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; 6 ಜನರು ಸಜೀವದಹನ

BIG NEWS: ಗ್ಲೌಸ್ ಫ್ಯಾಕ್ಟರಿಯಲ್ಲಿ ಅಗ್ನಿ ದುರಂತ; 6 ಜನರು ಸಜೀವದಹನ

ಮುಂಬೈ: ಗ್ಲೌಸ್ ತಯಾರಿಕಾ ಫ್ಯಾಕ್ಟರಿಯಲ್ಲಿ ಸಂಭವಿಸಿದ ಭೀಕರ ಅಗ್ನಿ ದುರಂತದಲ್ಲಿ 6 ಜನರು ಸಾವನ್ನಪ್ಪಿರುವ ಘಟನೆ ಮಹಾರಾಷ್ಟ್ರದ ಛತ್ರಪತಿ ಸಂಬಾಜಿ ನಗರದಲ್ಲಿ ನಡೆದಿದೆ.

ಹ್ಯಾಂಡ್ ಗ್ಲೌಸ್ ತಯಾರಿಕಾ ಕಂಪನಿಯಲ್ಲಿ ಈ ದುರಂತ ಸಂಭವಿಸಿದೆ. ಇಂದು ಬೆಳಗಿನ ಜಾವ ಬೆಂಕಿ ಅವಘಡ ಸಂಭವಿಸಿದ್ದು, 6 ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ. ಹಲವರು ಗಾಯಗೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ವೇಳೆ 10-15 ಜನ ಕಾರ್ಮಿಕರು ಕಟ್ಟಡದ ಒಳಗೆ ಸಿಲುಕಿಕೊಂಡಿದ್ದರು. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಲವರನ್ನು ರಕ್ಷಿಸಿದ್ದಾರೆ. ಆದರೆ 6 ಜನರು ಮೃತಪಟ್ಟಿದ್ದಾರೆ. ಸದ್ಯ ಕಟ್ಟಡದಲ್ಲಿ ಬೆಂಕಿ ತಹಬದಿಗೆ ಬಂದಿದೆ.

 

For Latest News Updates, Join Our Whatsapp Community🚩
RELATED ARTICLES

Most Popular