HomeKarnatakaರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಸಂಜೆ ಗೋಧೂಳಿ ಲಗ್ನದಲ್ಲಿ `ಗೋ ಪೂಜೆ’

ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಇಂದು ಸಂಜೆ ಗೋಧೂಳಿ ಲಗ್ನದಲ್ಲಿ `ಗೋ ಪೂಜೆ’

ಬೆಂಗಳೂರು  : ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ದೀಪಾವಳಿ ಹಬ್ಬದ ದಿನವಾದ ನವೆಂಬರ್ 14 ರ ಇಂದು ಗೋಪೂಜೆ ಮಾಡುವಂತೆ ರಾಜ್ಯ ಸರ್ಕಾರವು ಆದೇಶ ಹೊರಡಿಸಿದೆ.

ನವೆಂಬರ್‌  14ರ  ಮಂಗಳವಾರ ಎಲ್ಲಾ ದೇವಾಲಯಗಳಲ್ಲಿ ಸಂಜೆ ವಿಶೇಷವಾಗಿ ಗೋವಿನ ಪೂಜೆ ನಡೆಯಲಿದೆ. ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಸಲುವಾಗಿ ಇಂದು ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಂತರ   ಗೋವುಗಳನ್ನು ಅರಿಶಿಣ, ಕುಂಕುಮ ಹಚ್ಚಿ ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಅವುಗಳಿಗೆ ನೀಡಬೇಕು. ಸಂಜೆ 5.30 ರಿಂದ 6.30 ರವರೆಗೆ ಗೋಧೂಳಿ ಲಗ್ನದಲ್ಲಿ ಗೋಪೂಜೆ ನೆರವೇರಿಸಬೇಕು ಎಂದು ಮುಜರಾಯಿ ಇಲಾಖೆ ದೇವಾಲಯಗಳ ಸಿಬ್ಬಂದಿಗೆ ಸೂಚಿಸಲಾಗಿದೆ.

For Latest News Updates, Join Our Whatsapp Community🚩
RELATED ARTICLES

Most Popular