HomeLatest NewsBREAKING : ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ನಾಳೆ 'ಗೋಪೂಜೆ' ಕಡ್ಡಾಯ : ಸಚಿವ ರಾಮಲಿಂಗಾ...

BREAKING : ರಾಜ್ಯದ ಎಲ್ಲಾ ಮುಜರಾಯಿ ದೇವಾಲಯಗಳಲ್ಲಿ ನಾಳೆ ‘ಗೋಪೂಜೆ’ ಕಡ್ಡಾಯ : ಸಚಿವ ರಾಮಲಿಂಗಾ ರೆಡ್ಡಿ ಆದೇಶ


ಬೆಂಗಳೂರು : ರಾಜ್ಯದ ಮುಜರಾಯಿ ವ್ಯಾಪ್ತಿಯ ದೇವಾಲಯದಲ್ಲಿ ನಾಳೆ ಗೋಪೂಜೆ ಕಡ್ಡಾಯಗೊಳಿಸಿ ಸಚಿವ ರಾಮಲಿಂಗಾ ರೆಡ್ಡಿ ನಿರ್ದೇಶನ ನೀಡಿದ್ದಾರೆ

ಈ ಬಗ್ಗೆ ಸಾರಿಗೆ ಸಚಿವ ಹಾಗೂ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ ಮೌಖಿಕ ಆದೇಶ ಹೊರಡಿಸಿದ್ದಾರೆ.

ದೀಪಾವಳಿ ಬಲಿಪಾಡ್ಯಮಿ ದಿನದಂದು ಅಂದರೆ ನಾಳೆ ಮುಜರಾಯಿ ವ್ಯಾಪ್ತಿಗೊಳಪಡುವ ಎಲ್ಲಾ ದೇವಾಲಯಗಳಲ್ಲಿ ಗೋಪೂಜೆ ಮಾಡಲು ಸೂಚನೆ ನೀಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಲಿಪಾಡ್ಯಮಿಯಂದು ರಾಜ್ಯದ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ ಗೋವುಗಳನ್ನು ಪೂಜಿಸುವ ಸಲುವಾಗಿ ಆ ದಿನ ಗೋವುಗಳಿಗೆ ಸ್ನಾನ ಮಾಡಿಸಿ ದೇವಾಲಯಕ್ಕೆ ಕರೆತರಬೇಕು. ನಂತರ ಗೋವುಗಳನ್ನು ಅರಿಶಿಣ, ಕುಂಕುಮ ಹಚ್ಚಿ ಹೂವುಗಳಿಂದ ಅಲಂಕರಿಸಬೇಕು. ಅಕ್ಕಿ, ಬೆಲ್ಲ, ಬಾಳೆಹಣ್ಣು, ಸಿಹಿ ತಿನಿಸು ಮುಂತಾದ ಗೋಗ್ರಾಸವನ್ನು ಅವುಗಳಿಗೆ ನೀಡಬೇಕು ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular