ಗುಡಿಸಲುಗಳಿಗೆ ಬಸ್ ನುಗ್ಗಿಸಿದ ಮದ್ಯದ ಅಮಲಿನಲ್ಲಿದ್ದ ಚಾಲಕ: ನಾಲ್ವರು ಸಾವು, ಐವರಿಗೆ ಗಾಯ

ಪಣಜಿ: ದಕ್ಷಿಣ ಗೋವಾ ಜಿಲ್ಲೆಯ ಕೈಗಾರಿಕಾ ಎಸ್ಟೇಟ್‌ನಲ್ಲಿ ಖಾಸಗಿ ಬಸ್ ರಸ್ತೆ ಬದಿಯ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮತ್ತು ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಶನಿವಾರ ರಾತ್ರಿ 11.30 ರ ಸುಮಾರಿಗೆ ವೆರ್ನಾ ಇಂಡಸ್ಟ್ರಿಯಲ್ ಎಸ್ಟೇಟ್‌ನಲ್ಲಿ ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿದ್ದ ಕಾರ್ಮಿಕರು ಗುಡಿಸಲುಗಳಲ್ಲಿ ಮಲಗಿದ್ದಾಗ ಅಪಘಾತ ಸಂಭವಿಸಿದೆ. ಬಸ್ ಚಾಲಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಆ ಸಮಯದಲ್ಲಿ ಬಸ್ ಚಾಲಕ ಮದ್ಯದ ಅಮಲಿನಲ್ಲಿದ್ದ. ಘಟನೆಯ ಬಗ್ಗೆ ಯಾರಿಗಾದರೂ ದೂರು ನೀಡಿದರೆ ಕೊಲ್ಲುವುದಾಗಿ ಇತರ ಕಾರ್ಮಿಕರಿಗೆ ಬೆದರಿಕೆ ಹಾಕಿದ್ದ ಎಂದು ಕಾರ್ಮಿಕರೊಬ್ಬರು ಹೇಳಿದ್ದಾರೆ.

ಖಾಸಗಿ ಕಂಪನಿಯೊಂದರ ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಕಾರ್ಮಿಕರು ಮಲಗಿದ್ದ ಎರಡು ಗುಡಿಸಲುಗಳಿಗೆ ಡಿಕ್ಕಿ ಹೊಡೆದಿದೆ. ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡು ಗೋವಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಘಟನೆಯ ನಂತರ, ಯಾರಿಗಾದರೂ ದೂರು ನೀಡಿದರೆ ನಮ್ಮನ್ನು ಕೊಲ್ಲುವುದಾಗಿ ಬಸ್ ಚಾಲಕ ಬೆದರಿಕೆ ಹಾಕಿದ್ದಾನೆ. ಚಾಲಕ ಮದ್ಯದ ಅಮಲಿನಲ್ಲಿದ್ದನು ಎಂದು ರೂಪೇಂದರ್ ಕುಮಾರ್ ಮಾಥುರ್ ಹೇಳಿದ್ದಾರೆ, ಅವರ ಚಿಕ್ಕಪ್ಪ ರಮೇಶ್ ಮಾಥುರ್ ಮತ್ತು ಸಹೋದರ ಅನಿಲ್ ಮಾಥುರ್ ಘಟನೆಯಲ್ಲಿ ಮೃತಪಟ್ಟಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read