HomeIndiaಗೋವಾದಲ್ಲಿ ಅತ್ಯಾಚಾರವೆಸಗಿ ಅಶ್ಲೀಲ ವಿಡಿಯೋ ಪ್ರಸಾರ: ಕರ್ನಾಟಕದಲ್ಲಿ ಅರೆಸ್ಟ್

ಗೋವಾದಲ್ಲಿ ಅತ್ಯಾಚಾರವೆಸಗಿ ಅಶ್ಲೀಲ ವಿಡಿಯೋ ಪ್ರಸಾರ: ಕರ್ನಾಟಕದಲ್ಲಿ ಅರೆಸ್ಟ್

ಪಣಜಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಮತ್ತು ಅಶ್ಲೀಲ ವಿಡಿಯೋಗಳನ್ನು ಪ್ರಸಾರ ಮಾಡಿದ ಆರೋಪದ ಮೇಲೆ ಗೋವಾ ಪೊಲೀಸರು ಶನಿವಾರ ಕರ್ನಾಟಕದಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ ಎಂದು.

ವಾಲ್ಪೋಯ್ ಪೊಲೀಸರು ಗೋವಾ ಮಕ್ಕಳ ಕಾಯ್ದೆ, ಲೈಂಗಿಕ ಅಪರಾಧಗಳ ವಿರುದ್ಧ ಮಕ್ಕಳ ರಕ್ಷಣೆ(ಪೋಕ್ಸೊ) ಕಾಯ್ದೆ ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ತಿಂಗಳ ಆರಂಭದಲ್ಲಿ ಬಾಲಕಿಯ ಪೋಷಕರು ಆರೋಪಿ ವಿರುದ್ಧ ದೂರು ದಾಖಲಿಸಿದ್ದು, ನಂತರ ಆತ ಭೂಗತನಾಗಿದ್ದ. ಆ ವ್ಯಕ್ತಿ ಅಪ್ರಾಪ್ತ ಬಾಲಕಿಯೊಂದಿಗೆ ಸ್ನೇಹ ಬೆಳೆಸಿ ನಂತರ ಆಕೆಯ ಮೇಲೆ ಅತ್ಯಾಚಾರ ಎಸಗಿ ಆಕೆಯ ಅಶ್ಲೀಲ ವಿಡಿಯೋಗಳನ್ನು ಚಿತ್ರೀಕರಿಸಿದ್ದಾನೆ.

ಪೊಲೀಸರು ಆರೋಪಿಯನ್ನು ಕರ್ನಾಟಕದ ಗದಗದಲ್ಲಿ ಪತ್ತೆಹಚ್ಚಿ ಬಂಧಿಸಿದ್ದಾರೆ. ಗದಗದಲ್ಲಿ ಬಂಧಿಸಿ ಗೋವಾಕ್ಕೆ ಆರೋಪಿ ಕರೆತರಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular