HomeKarnataka'ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ' ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್...

‘ದೇವರು ವರನೂ ಕೂಡಲ್ಲ, ಶಾಪನೂ ಕೊಡಲ್ಲ’ ; ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ DCM ಡಿ.ಕೆ ಶಿವಕುಮಾರ್ ಪೋಸ್ಟ್.!

ಬೆಂಗಳೂರು :   ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮತ್ತು ಅವರ ನಡೆಯ ಬಗ್ಗೆ ಸಾಕಷ್ಟು ಕುತೂಹಲವಿದೆ.

ರಾಜೀನಾಮೆಗೂ ಮುನ್ನ ಮುಖ್ಯಮಂತ್ರಿಗಳ ಅಧಿಕೃತ ನಿವಾಸ ‘ಕಾವೇರಿ’ಯಲ್ಲಿ ನಡೆದ ಉಪಹಾರ ಸಭೆಯಲ್ಲಿ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಪಾದಗಳನ್ನು ಮುಟ್ಟಿ ನಮಸ್ಕರಿಸಿ, ಆಶೀರ್ವಾದ ಪಡೆದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಇದು ರಾಜ್ಯ ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂಬ ಸಂದೇಶವನ್ನು ರವಾನಿಸಿದೆ.

ಈ ಬೆನ್ನಲ್ಲೇ ಡಿಸಿಎಂ ಡಿಕೆ ಶಿವಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಒಂದನ್ನು ಹಂಚಿಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

”ದೇವರು ವರನೂ ಕೊಡಲ್ಲ, ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ ಮಾಡುತ್ತೇವೆ ಎಂಬುದು ಮುಖ್ಯ. ಇದಕ್ಕೆ ಅತ್ಯುತ್ತಮ ಉದಾಹರಣೆಯೇ ನಮ್ಮ ಸಿದ್ದರಾಮಯ್ಯನವರು. ಮೈಸೂರು ಜಿಲ್ಲೆಯ ಹಳ್ಳಿಯೊಂದರಲ್ಲಿ ಹುಟ್ಟಿ, ಬೆಳೆದು, ಹೋರಾಟದ ಮೂಲಕ ರಾಜಕೀಯಕ್ಕೆ ಬಂದು, ಸಾಮಾಜಿಕ ನ್ಯಾಯದ ಹರಿಕಾರ ಹಾಗೂ ಬಡವರ ಬಂಧುವಾಗಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ನನ್ನ ಆತ್ಮೀಯರಾದ ಶ್ರೀ ಸಿದ್ದರಾಮಯ್ಯ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಕರ್ನಾಟಕದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಯಶಸ್ವಿ, ಪ್ರಭಾವಶಾಲಿ ಹಾಗೂ ದೀರ್ಘಾವಧಿ ಮುಖ್ಯಮಂತ್ರಿಯಾಗಿ ಜನಮಾನಸದಲ್ಲಿ ನೆಲೆಸಿರುವ ಅವರು, ಭಾರತೀಯ ರಾಜಕಾರಣದ ಧೀಮಂತ ನಾಯಕ. ಜನಪರ ಯೋಜನೆಗಳಿಂದ ಹಿಡಿದು ರಾಜ್ಯದಲ್ಲಿ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ಅವರು ನೀಡಿದ ಕೊಡುಗೆ ಅವಿಸ್ಮರಣೀಯ. ಸುಮಾರು ಐವತ್ತು ವರ್ಷಗಳ ಅವರ ಅಗಾಧ ರಾಜಕೀಯ ಅನುಭವ, ಸಾಮಾಜಿಕ ಕಳಕಳಿ ಮತ್ತು ಜನಪರ ಯೋಜನೆಗಳು ಸದಾ ಸ್ಮರಣೀಯ. 2020ರಲ್ಲಿ ನಾನು ಕೆಪಿಸಿಸಿ ಅಧ್ಯಕ್ಷನಾಗಿ ಆಯ್ಕೆಯಾದ ದಿನದಿಂದಲೂ ಇಂದಿನವರೆಗೆ, ಸಿದ್ದರಾಮಯ್ಯನವರು ನನ್ನ ಹೆಗಲಿಗೆ ಹೆಗಲು ಕೊಟ್ಟು ಪಕ್ಷ ಸಂಘಟನೆಯಲ್ಲಿ ಜೊತೆಯಾಗಿ ನಿಂತಿದ್ದಾರೆ. ಅವರ ಆಡಳಿತದಲ್ಲಿ ನಾನು ಸಚಿವನಾಗಿ, ಉಪಮುಖ್ಯಮಂತ್ರಿಯಾಗಿ ಮಾರ್ಗದರ್ಶನ ಪಡೆದುಕೊಂಡಿದ್ದು ನನ್ನ ಭಾಗ್ಯ. ಮುಂದಿನ ದಿನಗಳಲ್ಲೂ ರಾಜ್ಯದ ಹಿತದೃಷ್ಟಿಯಿಂದ ಹಾಗೂ ನಮ್ಮ ಪಕ್ಷದ ಬಲವರ್ಧನೆಗೆ ಅವರ ಮಾರ್ಗದರ್ಶನ, ಹಿರಿಯ ಅನುಭವ ನಮಗೆ ಹೀಗೆಯೇ ಮುಂದುವರಿಯಲಿ ಎಂದು ಆಶಿಸುತ್ತೇನೆ. ಕರ್ನಾಟಕದ ಪ್ರಗತಿಗಾಗಿ ನಾವೆಲ್ಲರೂ ಒಟ್ಟಾಗಿ ನಡೆಯೋಣ” ಎಂದು ಡಿಕೆಶಿ ಪೋಸ್ಟ್ ಹಂಚಿಕೊಂಡಿದ್ದಾರೆ.

ಜಂಟಿ ಸುದ್ದಿಗೋಷ್ಠಿ: ರಾಜೀನಾಮೆಯ ನಂತರ ನಡೆದ ಪತ್ರಿಕಾಗೋಷ್ಠಿಯಲ್ಲಿ ನಿನ್ನೆ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಇಬ್ಬರೂ ಒಟ್ಟಾಗಿ ಕಾಣಿಸಿಕೊಂಡಿದ್ದರು. ಈ ವೇಳೆ ಸಿದ್ದರಾಮಯ್ಯ ಅವರು ಡಿ.ಕೆ. ಶಿವಕುಮಾರ್ ಅವರ ಕೈ ಹಿಡಿದು ಮೇಲಕ್ಕೆತ್ತಿ, ಪಕ್ಷದ ಒಗ್ಗಟ್ಟನ್ನು ಪ್ರದರ್ಶಿಸಿದರು. ರಾಜೀನಾಮೆಯ ನಂತರ, ಹೊಸ ಸರ್ಕಾರ ರಚನೆ ಮತ್ತು ಮುಂದಿನ ನಡೆಗಳ ಬಗ್ಗೆ ಚರ್ಚಿಸಲು ಸಿದ್ದರಾಮಯ್ಯ ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿದ್ದಾರೆ.

ಪಕ್ಷದ ಅಧಿಕೃತ ಪೋಸ್ಟ್‌ಗಳು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ತನ್ನ ಸಾಮಾಜಿಕ ಜಾಲತಾಣಗಳಲ್ಲಿ “Unity is our strength” (ಒಗ್ಗಟ್ಟೇ ನಮ್ಮ ಬಲ) ಎಂಬ ಸಂದೇಶದೊಂದಿಗೆ ಇಬ್ಬರೂ ನಾಯಕರು ನಗುತ್ತಾ ಇರುವ ಫೋಟೋಗಳನ್ನು ಹಂಚಿಕೊಂಡಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular