ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮುನ್ನ ಉಕ್ಕಿ ಹರಿದ ಅಭಿಮಾನ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಪೋಸ್ಟರ್ ಗೆ ಕ್ಷೀರಾಭೀಷೇಕ

ನವದೆಹಲಿ: ರೋಹಿತ್ ಶರ್ಮಾ ನೇತೃತ್ವದ ಭಾರತೀಯ ಕ್ರಿಕೆಟ್ ತಂಡವು ನವೆಂಬರ್ 19 ರಂದು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಐಸಿಸಿ ಏಕದಿನ ವಿಶ್ವಕಪ್ 2023 ರ ಫೈನಲ್‌ನಲ್ಲಿ ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಆಸ್ಟ್ರೇಲಿಯಾ ವಿರುದ್ಧ ಪೈಪೋಟಿ ನಡೆಸಲಿದೆ.

ಭಾರತೀಯ ನಾಯಕ ರೋಹಿತ್ ಮತ್ತು ವಿರಾಟ್ ಕೊಹ್ಲಿ ಪೋಸ್ಟರ್ ಗಳಿಗೆ ಅಭಿಮಾನಿಗಳು ಕ್ಷೀರಾಭಿಷೇಕ ಮಾಡಿದ್ದಾರೆ.

ಪುಣೆಯಲ್ಲಿ ವಿರಾಟ್ ಮತ್ತು ರೋಹಿತ್ ಅವರ ಪೋಸ್ಟರ್‌ಗಳಿಗೆ ಅಭಿಮಾನಿಗಳು ಹಾಲು ಸುರಿಯುತ್ತಿರುವ ವಿಡಿಯೋ ಇದೀಗ ಸಾಮಾಜಿಕ ವಲಯದಲ್ಲಿ ವೈರಲ್ ಆಗುತ್ತಿದೆ. ಇಬ್ಬರು-ಸ್ಟಾರ್ ಕ್ರಿಕೆಟಿಗರ ಅಭಿಮಾನಿಗಳು ಹಾಲು ಸುರಿದು ಅಭಿಮಾನ ಪ್ರದರ್ಶಿಸಿದ್ದಾರೆ.

2003 ರಲ್ಲಿ, ರಿಕಿ ಪಾಂಟಿಂಗ್ ನೇತೃತ್ವದ ಆಸ್ಟ್ರೇಲಿಯಾ ತಂಡವು ODI ವಿಶ್ವಕಪ್‌ನ ಫೈನಲ್‌ನಲ್ಲಿ ಭಾರತವನ್ನು 125 ರನ್‌ಗಳಿಂದ ಸೋಲಿಸಿತು. 2003ರ ಸೋಲಿಗೆ ಸೇಡು ತೀರಿಸಿಕೊಳ್ಳಲು ಭಾರತ ಸಜ್ಜಾಗಿದೆ.

https://twitter.com/CricCrazyJohns/status/1726134712643826094

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read