ಕಾರವಾರ: ಗೋಕರ್ಣಕ್ಕೆ ಪ್ರವಾಸಕ್ಕೆಂದು ಹೋಗಿದ್ದ ಮಹಿಳೆಯೊಬ್ಬರು ಬೋಟಿಂಗ್ ಮಾಡುವಾಗ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿರುವ ಘಟನೆ ನಡೆದಿದೆ.
ನಾಗರತಿನಮ್ (58) ಮೃತ ಮಹಿಳೆ. ಬೆಂಗಳೂರು ಮೂಲದ ಮಹಿಳೆ ಕುಟುಂಬದ ಜೊತೆ ಉತ್ತರ ಕನ್ನಡ ಜಿಲ್ಲೆಯ ಗೋಕರ್ಣ ಪ್ರವಾಸಕ್ಕೆ ತೆರಳಿದ್ದರು. ಈ ವೇಳೆ ಪ್ಯಾರಡೈಸ್ ಬೀಚ್ ನಲ್ಲಿ ಬೋಟಿಂಗ್ ಗೆ ಹೋಗಿದ್ದರು. ಬೋಟಿಂಗ್ ವೇಳೆ ಮಹಿಳೆ ಏಕಾಏಕಿ ಅಸ್ವಸ್ಥರಾಗಿದ್ದರು. ಅವರನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಫಲಕಾರಿಯಾಗಿಲ್ಲ.
ಆಸ್ಪತ್ರೆಗೆ ತಲುಪುವಷ್ಟರಲ್ಲೇ ಮಹಿಳೆ ಕೊನೆಯುಸಿರೆಳೆದಿದ್ದರು. ಆಂಬುಲೆನ್ಸ್ ಸರಿಯಾದ ಸಮಯಕ್ಕೆ ಬಾರದಿರುವುದೇ ಮಹಿಳೆ ಸಾವಿಗೆ ಕಾರಣ ಎಂಬ ಆರೋಪ ಕೇಳಿಬಂದಿದೆ. ಗೋಕರ್ಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

