HomeLatest Newsಚಿನ್ನ ಕಳ್ಳತನ ಮಾಡಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾನೇಜರ್ ನ ಬರ್ಬರ ಹತ್ಯೆ

ಚಿನ್ನ ಕಳ್ಳತನ ಮಾಡಿ ಅದ್ಧೂರಿಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಮ್ಯಾನೇಜರ್ ನ ಬರ್ಬರ ಹತ್ಯೆ

ಮೈಸೂರು: ಚಿನ್ನ ಕಳ್ಳತನ ಅಮಡಿ ಗಿರಿವಿಯಿಟ್ಟು ಅದ್ಧೂರುಯಾಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆಯ ಬ್ಯಾಡರಪುರದ ಮೋಹನ್ ಕುಮಾರ್ (31) ಕೊಲೆಯಾದ ಯುವಕ. 60 ಗ್ರಾಂ ಚಿನ್ನಕ್ಕಾಗಿ ಯುವಕನನ್ನು ಕಾರಿನಲ್ಲಿಯೇ ಹತ್ಯೆಗೈದು ದುಷ್ಕರ್ಮಿಗಳು ಶವವನ್ನು ಸುಟ್ಟು ಹಾಕಿದ್ದರು.

ಏ. 18 ರಂದು ನಡೆದಿದ್ದ ಕೊಲೆ ಪ್ರಕರಣವನ್ನು ಮೈಸೂರು ಪೊಲೀಸರು ಬೇಧಿಸಿದ್ದು, ಒಟ್ಟು ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಓರ್ವ ಆರೋಪಿ ತಲೆಮರೆಸಿಕೊಂಡಿದ್ದಾನೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರಜ್ವಲ್, ಚಂದು, ಕಬೀರ್ ಕಾಳಯ್ಯ, ದರ್ಶನ್ ಬಂಧಿತ ಆರೋಪಿ. ಶ್ರೀನಿವಾಸ್ ಎಂಬ ಪ್ರಮುಖ ಆರೋಪಿ ಪರಾರಿಯಾಗಿದ್ದಾನೆ. ಬೋಗಾದಿ ಲಾಡ್ಜ್ ನಲ್ಲಿ ಮ್ಯಾನೇಜರ್ ಆಗಿದ್ದ ಮೋಹನ್ ಕುಮಾರ್ ಗೆ ಲಾಡ್ಜ್ ನಲ್ಲಿ ಇಸ್ಪೀಟ್ ಆಡಲು ಬರುತ್ತಿದ್ದ ಆರೋಪಿ ಶ್ರೀನಿವಾಸ್ ಪರಿಚಯವಾಗಿದೆ. ಜೂಜಿಗಾಗಿ ಶ್ರೀನಿವಾಸ್ ಪತ್ನಿಯ 60 ಗ್ರಾಂ ಚಿನ್ನದ ಸರ ತಂದಿದ್ದ. ಗಿರವಿ ಅಂಗಡಿಯವರು ಅಂದು ಗಿರವಿ ಇಟ್ಟುಕೊಂಡಿರಲಿಲ್ಲ. ಹಾಗಾಗಿ ಲಾಡ್ಜ್ ರೂಂ ನಲ್ಲಿ ತಲೆದಿಂಬನ ಕೆಳಗೆ ಚಿನ್ನದ ಸರ ಇಟ್ಟಿದ್ದ. ಹೀಗೆ ಇಟ್ಟಿದ್ದ ಚಿನ್ನದ ಸರವನ್ನು ಮೋಹನ್ ಕುಮಾರ್ ಕಳು ಮಾಡಿದ್ದ.

ಬಳಿಕ ಸ್ವಗ್ರಾಮ ಬ್ಯಾಡರಪುರಕ್ಕೆ ತೆರಳಿ ಕದ್ದ ಚಿನ್ನದ ಸರ ಗಿರವಿ ಇಟ್ತು ನಿಶ್ಚಿತಾರ್ಥ ಮಾಡಿಕೊಂಡಿದ್ದ. ಈ ಬಗ್ಗೆ ಸರಸ್ವತಿಪುರಂ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಶ್ರೀನಿವಾಸ್, ಮೋಹನ್ ಕುಮಾರ್ ನನ್ನು ಮನೆಯಿಂದ ಕರೆಸಿ ಕಾರಿನಲ್ಲಿ ಕರೆದೊಯ್ದು ಹತ್ಯೆ ಮಾಡಿದ್ದ. ಬಳಿಕ ಗುಮಚನಹಳ್ಳಿ ಬಳಿ ಶವ ಸುಟ್ತು ಹಾಕಿ ಶ್ರೀನಿವಾಸ್ ಗ್ಯಾಂಗ್ ಪರರಯಾಗಿತ್ತು.

For Latest News Updates, Join Our Whatsapp Community🚩
RELATED ARTICLES

Most Popular