HomeIndiaಆಭರಣ ಮಳಿಗೆಗೆ ನುಗ್ಗಿ 21 ಲಕ್ಷ ಮೌಲ್ಯದ ಚಿನ್ನಾಭರಣ, 5 ಲಕ್ಷ ನಗದು ಲೂಟಿ

ಆಭರಣ ಮಳಿಗೆಗೆ ನುಗ್ಗಿ 21 ಲಕ್ಷ ಮೌಲ್ಯದ ಚಿನ್ನಾಭರಣ, 5 ಲಕ್ಷ ನಗದು ಲೂಟಿ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ ಆಭರಣ ಅಂಗಡಿಯಿಂದ 300 ಗ್ರಾಂ ತೂಕದ ಚಿನ್ನಾಭರಣ ಮತ್ತು 5 ಲಕ್ಷ ರೂ. ಲೂಟಿ ಮಾಡಲಾಗಿದೆ.

ಜಲೇಶ್ವರ ಕಮರ್ದ ಪೊಲೀಸ್ ಠಾಣಾ ವ್ಯಾಪ್ತಿಯ ಕಮರ್ದಾ ಬಜಾರ್‌ನಲ್ಲಿ ಲೂಟಿ ನಡೆದಿದೆ. ಆಭರಣ ಅಂಗಡಿ ಮಾಲೀಕರು ಕುಡಿಯುವ ನೀರು ತರಲು ಹೊರಗೆ ಹೋಗಿದ್ದರು. ಆ ವೇಳೆ ದುಷ್ಕರ್ಮಿಗಳು ಆಭರಣ ಮಳಿಗೆಗೆ ನುಗ್ಗಿ ಚಿನ್ನಾಭರಣ ಚೀಲ ಹಾಗೂ ಖಜಾನೆಯಲ್ಲಿದ್ದ 5 ಲಕ್ಷ ನಗದು ದೋಚಿ ಪರಾರಿಯಾಗಿದ್ದಾರೆ.

ದುಷ್ಕರ್ಮಿಗಳು ತೆಗೆದುಕೊಂಡು ಹೋಗಿದ್ದ ಚಿನ್ನಾಭರಣ ಚೀಲದಲ್ಲಿ 300 ಗ್ರಾಂ ತೂಕದ ಆಭರಣಗಳಿದ್ದವು ಎಂದು ಅಂಗಡಿ ಮಾಲೀಕರು ತಿಳಿಸಿದ್ದಾರೆ. ಈ ಚಿನ್ನಾಭರಣಗಳ ಮಾರುಕಟ್ಟೆ ಮೌಲ್ಯ ಅಂದಾಜು 21 ಲಕ್ಷ ರೂ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರೋಡೆಯಾದ ಬಗ್ಗೆ ಮಾಹಿತಿ ಪಡೆದ ಕಮರ್ದಾ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಪರಿಶೀಲಿಸಿದರು. ಆರೋಪಿಗಳ ಪತ್ತೆಗೆ ಪೊಲೀಸರು ತನಿಖೆ ಆರಂಭಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular