HomeLatest NewsBREAKING : ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಬಾಕ್ಸರ್ ಪ್ರೀತಿ ಪವಾರ್‌ಗೆ ಚಿನ್ನದ ಪದಕ

BREAKING : ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಬಾಕ್ಸರ್ ಪ್ರೀತಿ ಪವಾರ್‌ಗೆ ಚಿನ್ನದ ಪದಕ

ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಮಹಿಳಾ ಬಾಕ್ಸರ್ ಪ್ರೀತಿ ಪವಾರ್ ಅದ್ಭುತ ಪ್ರದರ್ಶನ ನೀಡಿ ಮಹಿಳೆಯರ 54 ಕೆಜಿ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ. ಫೈನಲ್‌ನಲ್ಲಿ ಎದುರಾಳಿಯನ್ನು ಮಣಿಸಿದ ಪ್ರೀತಿ, ಭಾರತಕ್ಕೆ ಮತ್ತೊಂದು ಚಿನ್ನದ ಪದಕ ತಂದುಕೊಟ್ಟು ದೇಶದ ಕೀರ್ತಿಯನ್ನು ಮತ್ತಷ್ಟು ಹೆಚ್ಚಿಸಿದ್ದಾರೆ.

ಹೌದು.  ಸ್ಯಾಟ್ ಲ್ಯಾಂಡ್ ನಲ್ಲಿ ನಡೆಯುತ್ತಿರುವ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತೀಯ ಬಾಕ್ಸಿಂಗ್ ತಂಡದ ಭರ್ಜರಿ ಪ್ರದರ್ಶನ ಮುಂದುವರಿದಿದೆ. ಮಹಿಳೆಯರ 54 ಕೆಜಿ ವಿಭಾಗದಲ್ಲಿ ಭಾರತದ ಪ್ರತಿಭಾವಂತ ಬಾಕ್ಸರ್ ಪ್ರೀತಿ ಪವಾರ್ ಚಿನ್ನದ ಪದಕ ಗೆದ್ದು ದೇಶಕ್ಕೆ ಹೆಮ್ಮೆಯ ಕ್ಷಣ ತಂದಿದ್ದಾರೆ.ಕೆನಡಾದ ಸ್ಕಾರ್ಲೆಟ್ ಸವಾನಾ ಡೆಲ್ಗಾಡೊ ಅವರನ್ನು ಏಕಪಕ್ಷೀಯವಾಗಿ ಮಣಿಸಿದ ಭಾರತದ ಪ್ರೀತಿ ಪವಾರ್, ಮಹಿಳೆಯರ 54 ಕೆಜಿ ಬಾಕ್ಸಿಂಗ್ ವಿಭಾಗದಲ್ಲಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಪಂದ್ಯದುದ್ದಕ್ಕೂ ಶಾಂತಚಿತ್ತ, ಆತ್ಮವಿಶ್ವಾಸ ಮತ್ತು ಸಂಪೂರ್ಣ ಮೇಲುಗೈ ಸಾಧಿಸಿದ ಪ್ರೀತಿ ಪವಾರ್, ಚಾಂಪಿಯನ್‌ಗೆ ತಕ್ಕ ಪ್ರದರ್ಶನ ನೀಡಿ ಕಾಮನ್‌ವೆಲ್ತ್ ಕ್ರೀಡಾಕೂಟ 2026ರಲ್ಲಿ ಭಾರತಕ್ಕೆ ಮತ್ತೊಂದು ಅಮೂಲ್ಯ ಚಿನ್ನದ ಪದಕ ತಂದುಕೊಟ್ಟರು.ಈ ಮೂಲಕ ಭಾರತ ಇದುವರೆಗೆ 6 ಚಿನ್ನದ ಪದಕವನ್ನು ಮುಡಿಗೇರಿಸಿಕೊಂಡಿದೆ.

ಫೈನಲ್‌ ಪಂದ್ಯದಲ್ಲಿ ಆತ್ಮವಿಶ್ವಾಸದಿಂದ ಕಣಕ್ಕಿಳಿದ ಪ್ರೀತಿ ಪವಾರ್, ಆರಂಭದಿಂದಲೇ ಪ್ರಾಬಲ್ಯ ಮೆರೆದರು. ಆಕ್ರಮಣಕಾರಿ ಹಾಗೂ ನಿಖರ ಆಟದ ಮೂಲಕ ಎದುರಾಳಿಯನ್ನು ಮಣಿಸಿ ಚಿನ್ನದ ಪದಕವನ್ನು ತಮ್ಮದಾಗಿಸಿಕೊಂಡರು. ಈ ಗೆಲುವಿನೊಂದಿಗೆ ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಭಾರತದ ಪದಕ ಬೇಟೆಗೆ ಮತ್ತೊಂದು ಚಿನ್ನ ಸೇರ್ಪಡೆಯಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರೀತಿ ಪವಾರ್ ಅವರ ಈ ಸಾಧನೆ ಭಾರತೀಯ ಬಾಕ್ಸಿಂಗ್‌ಗೆ ಮತ್ತೊಂದು ಮಹತ್ವದ ಮೈಲಿಗಲ್ಲಾಗಿದ್ದು, ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿಯಾಗಿದೆ. ಭಾರತದ ಬಾಕ್ಸರ್‌ಗಳು ಈ ಕ್ರೀಡಾಕೂಟದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುತ್ತಿದ್ದು, ಇನ್ನಷ್ಟು ಪದಕಗಳ ನಿರೀಕ್ಷೆ ಹೆಚ್ಚಿಸಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular