HomeKarnatakaSHOCKING: ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ...

SHOCKING: ಧರ್ಮಸ್ಥಳದಲ್ಲಿ ವೃದ್ಧೆಗೆ ಮತ್ತು ಬರುವ ಜ್ಯೂಸ್ ನೀಡಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಕಳವು

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ವೃದ್ಧೆಗೆ ಮತ್ತು ಬರುವ ಲಡ್ಡು ಮತ್ತು ಜ್ಯೂಸ್ ನೀಡಿ ಅಸ್ವಸ್ಥರನ್ನಾಗಿಸಿ 10 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿ ಪರಾರಿಯಾದ ಘಟನೆ ನಡೆದಿದೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿನ ಜೆಪಿ ನಗರ ನಿವಾಸಿ ಪ್ರೇಮಾ(70) ಚಿನ್ನಾಭರಣ ಕಳೆದುಕೊಂಡವರು. ಮೇ 23ರಂದು ಬೆಂಗಳೂರಿನಿಂದ ಉಡುಪಿ ಜಿಲ್ಲೆಯ ಬ್ರಹ್ಮಾವರಕ್ಕೆ ಸಂಬಂಧಿಕರ ಮನೆಗೆ ಬಂದಿದ್ದ ಅವರು ಮೇ 25 ರಂದು ಮಧ್ಯಾಹ್ನ ಶ್ರೀ ಕ್ಷೇತ್ರ ಧರ್ಮಸ್ಥಳ ದೇವಾಲಯಕ್ಕೆ ಆಗಮಿಸಿದ್ದಾರೆ. ದೇವರ ದರ್ಶನ ಮುಗಿಸಿ ರಾತ್ರಿ 9.45 ರ ಸುಮಾರಿಗೆ ವಾಪಸ್ ಊರಿಗೆ ಹೋಗಲು ಮುಖ್ಯದ್ವಾರದ ಮುಂಭಾಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣಕ್ಕೆ ಬಂದು ಕುಳಿತುಕೊಂಡಿದ್ದಾರೆ. ಅವರ ಪಕ್ಕದಲ್ಲಿಯೇ ಕುಳಿತಿದ್ದ ಅಪರಿಚಿತ ವ್ಯಕ್ತಿ ಮಾತನಾಡಿಸಿ ತಾನು ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಹೋಗಿ ಪೂಜೆ ಮಾಡಿಸಿ ಪ್ರಸಾದ ತೆಗೆದುಕೊಂಡು ಬಂದಿದ್ದೇನೆ ಎಂದು ಹೇಳಿ ಲಡ್ಡು ಪ್ರಸಾದ ಕೊಟ್ಟು ನಂತರ ಜ್ಯೂಸ್ ಬಾಟಲಿಯಿಂದ ಜ್ಯೂಸ್ ಕುಡಿಯುವಂತೆ ಒತ್ತಾಯಿಸಿದ್ದಾನೆ. ಪ್ರೇಮಾ ಅವರು ಸಲ್ಪ ಜ್ಯೂಸ್ ಕುಡಿದು ವಾಪಸ್ ಕೊಟ್ಟಿದ್ದು ನಂತರ ಅಸ್ವಸ್ಥರಾಗಿದ್ದಾರೆ.

ದೇವಾಲಯದ ಮಹಾದ್ವಾರದ ಬಳಿ ಇರುವ ಕಟ್ಟೆಯ ಬಳಿಗೆ ಅವರನ್ನು ಕರೆದುಕೊಂಡು ಹೋಗಿ ಅಪರಿಚಿತ ಕೂರಿಸಿದ್ದಾನೆ. ಉಪಾಯವಾಗಿ ಅವರ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ದೋಚಿ ಬಸ್ ನಲ್ಲಿ ಸೀಟು ಇದೆಯಾ ಎಂದು ನೋಡಿಕೊಂಡು ಬರುವುದಾಗಿ ಹೇಳಿ ಪರಾರಿಯಾಗಿದ್ದಾನೆ. ಅಸ್ವಸ್ಥಗೊಂಡಿದ್ದ ಪ್ರೇಮಾ ಅವರನ್ನು ಗಮನಿಸಿದವರು ಉಜಿರೆ ಆಸ್ಪತ್ರೆಗೆ ದಾಖಲಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪ್ರೇಮಾ ಅವರ ಕೊರಳಲ್ಲಿದ್ದ ಚಿನ್ನದ ಸರ, ಪರ್ಸ್ ನಲ್ಲಿದ್ದ ಬಳೆ, ಚಿನ್ನದ ಸರ, 7 ಸಾವಿರ ರೂ. ನಗದು ಸೇರಿ 10 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ದೋಚಲಾಗಿದೆ. ಧರ್ಮಸ್ಥಳ ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ. ಚಿಕಿತ್ಸೆ ಪಡೆದ ಪ್ರೇಮಾ ಬೆಂಗಳೂರಿಗೆ ತೆರಳಿದ್ದಾರೆ.

ಚಿತ್ರಕೃಪೆ: ಎಐ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular