ಗ್ರಾಹಕರಿಗೆ ಬಿಗ್ ಶಾಕ್: ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೇರಿದ ಚಿನ್ನದ ದರ

ಮುಂಬೈ: ಹಬ್ಬದ ಹೊತ್ತಲ್ಲಿ ಚಿನ್ನಾಭರಣ ಖರೀದಿಸುವ ನಿರೀಕ್ಷೆಯಲ್ಲಿದ್ದವರಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಚಿನ್ನದ ದರ ಸಾರ್ವಕಾಲಿಕ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ.

ಸೋಮವಾರ ಮುಂಬೈ ಚಿನಿವಾರ ಪೇಟೆಯಲ್ಲಿ ಶುದ್ಧ ಚಿನ್ನದ ದರ ಪ್ರತಿ 10 ಗ್ರಾಂಗೆ 250 ರೂ. ಹೆಚ್ಚಳವಾಗಿ 78,700 ರೂಪಾಯಿಗೆ ತಲುಪಿದೆ. ಇದು ಈವರೆಗಿನ ಗರಿಷ್ಠ ದರವಾಗಿದೆ. ಅದೇ ರೀತಿ ಬೆಳ್ಳಿ ದರ 1ಕೆ.ಜಿಗೆ 94 ಸಾವಿರ ತಲುಪಿದ್ದು, ಶೀಘ್ರವೇ ಒಂದು ಲಕ್ಷ ರೂಪಾಯಿಗೆ ತಲುಪಬಹುದು ಎಂದು ಅಂದಾಜಿಸಲಾಗಿದೆ.

ಮಧ್ಯ ಪ್ರಾಚ್ಯದಲ್ಲಿನ ಯುದ್ಧದ ಬಿಕ್ಕಟ್ಟು, ಭೌಗೋಳಿಕ ಉದ್ವಿಗ್ನತೆ ಕಾರಣ ಸತತ ಆರು ದಿನಗಳಿಂದ ಷೇರು ಪೇಟೆಯಲ್ಲಿ ಇಳಿಮುಖ ಪ್ರವೃತ್ತಿ ಮುಂದುವರೆದಿದೆ. ಜಾಗತಿಕ ಅಸ್ಥಿರತೆ ಪರಿಣಾಮ ಹೂಡಿಕೆದಾರರು ಚಿನ್ನದ ಮೇಲೆ ಹೆಚ್ಚು ಆಸಕ್ತಿ ತೋರಿಸುತ್ತಿದ್ದಾರೆ. ಚಿನ್ನದ ಮೇಲೆ ಹೆಚ್ಚಿನ ಹೂಡಿಕೆ ಮಾಡುತ್ತಿರುವುದರಿಂದ ಬೇಡಿಕೆ ಹೆಚ್ಚಾಗಿ ದರ ಏರಿಕೆಯಾಗುತ್ತಿದೆ ಎನ್ನಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read