HomeBusinessಚಿನ್ನದ ದರದಲ್ಲಿ ದಿಢೀರ್ ಏರಿಕೆ ಚಿನ್ನದ ಬೆಲೆಯಲ್ಲಿ 700 ರೂ,ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 10 ಸಾವಿರ...

ಚಿನ್ನದ ದರದಲ್ಲಿ ದಿಢೀರ್ ಏರಿಕೆ ಚಿನ್ನದ ಬೆಲೆಯಲ್ಲಿ 700 ರೂ,ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 10 ಸಾವಿರ ಏರಿಕೆ

ಬೆಂಗಳೂರು, ಮಾರ್ಚ್ 10: ಕಳೆದ ಕೆಲವು ದಿನಗಳಿಂದ ಸತತ ಇಳಿಕೆ ಕಂಡು ಸಮಾಧಾನ ತಂದಿದ್ದ ಚಿನ್ನದ ಬೆಲೆ, ಇಂದು ಮಂಗಳವಾರ ಮತ್ತೆ ಏರಿಕೆಯ ಹಾದಿ ಹಿಡಿದಿದೆ. ಜಾಗತಿಕ ಮಟ್ಟದಲ್ಲಿ ಉಂಟಾಗಿರುವ ಯುದ್ಧದ ಭೀತಿ ಮತ್ತು ಆರ್ಥಿಕ ಅಸ್ಥಿರತೆಯ ಪರಿಣಾಮವಾಗಿ ಹಳದಿ ಲೋಹದ ಬೆಲೆ ಇಂದು ಗಗನಕ್ಕೇರಿದೆ.

ನಿನ್ನೆ ಇಳಿಕೆ ಕಂಡಿದ್ದ ಚಿನ್ನದ ಬೆಲೆ ಇಂದು ದಿಢೀರ್ ಏರಿಕೆಯಾಗಿದೆ. 24 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹700 ಏರಿಕೆಯಾಗಿದ್ದು, ಈಗ ಬೆಂಗಳೂರಿನಲ್ಲಿ ಅದರ ಬೆಲೆ ₹1,62,380 ತಲುಪಿದೆ.

ಬೆಳ್ಳಿಯಲ್ಲೂ ಭರ್ಜರಿ ಜಿಗಿತ: ಬಂಗಾರದ ಜೊತೆಗೆ ಬೆಳ್ಳಿಯೂ ಇಂದು ದುಬಾರಿಯಾಗಿದೆ. ಒಂದೇ ದಿನದಲ್ಲಿ ಬೆಳ್ಳಿ ಬೆಲೆ ಸರಿಸುಮಾರು ₹10 ಸಾವಿರದಷ್ಟು ಏರಿಕೆ ಕಂಡಿರುವುದು ಜನಸಾಮಾನ್ಯರಿಗೆ ಶಾಕ್ ನೀಡಿದೆ. ಬೆಂಗಳೂರಿನಲ್ಲಿ 100 ಗ್ರಾಂ ಬೆಳ್ಳಿ ಬೆಲೆ ₹29,000 ರಷ್ಟಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ

24 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 16,238 ರೂ

22 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 14,885 ರೂ

18 ಕ್ಯಾರಟ್​ನ 1 ಗ್ರಾಂ ಚಿನ್ನದ ಬೆಲೆ: 12,179 ರೂ

ಬೆಳ್ಳಿ ಬೆಲೆ 1 ಗ್ರಾಂಗೆ: 280 ರೂ

ವಿವಿಧ ನಗರಗಳಲ್ಲಿರುವ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್​ಗೆ)

ಬೆಂಗಳೂರು: 14,885 ರೂ

ಚೆನ್ನೈ: 15,050 ರೂ

ಮುಂಬೈ: 14,885 ರೂ

ದೆಹಲಿ: 14,900 ರೂ

ಕೋಲ್ಕತಾ: 14,885 ರೂ

ಕೇರಳ: 14,885 ರೂ

ಅಹ್ಮದಾಬಾದ್: 14,890 ರೂ

ಜೈಪುರ್: 14,900 ರೂ

ಲಕ್ನೋ: 14,900 ರೂ

ಭುವನೇಶ್ವರ್: 14,885 ರೂ

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular