HomeKarnatakaBREAKING: ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

BREAKING: ದಾಖಲೆ ಇಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂ. ಮೌಲ್ಯದ ಚಿನ್ನಾಭರಣ ಜಪ್ತಿ

ಚಿತ್ರದುರ್ಗ: ದಾಖಲೆಯಿಲ್ಲದೆ ಸಂಗ್ರಹಿಸಿದ್ದ 3.55 ಕೋಟಿ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಲಾಗಿದೆ. ಚಿತ್ರದುರ್ಗ ಜಿಲ್ಲೆ ಹಿರಿಯೂರು ಪಟ್ಟಣದಲ್ಲಿ ಅಪಾರ ಪ್ರಮಾಣದ ಚಿನ್ನ ಜಪ್ತಿ ಮಾಡಲಾಗಿದೆ.

ಹಿರಿಯೂರು ನಗರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿದ 5 ಕೆಜಿ 250 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದುಕೊಂಡಿದ್ದಾರೆ. ದಾಖಲೆ ಇಲ್ಲದೆ ಚಿನ್ನ ಸಂಗ್ರಹಿಸಿದ್ದು, ತಹಶೀಲ್ದಾರ್ ರಾಜೇಶ್, ಸಿಪಿಐ ರಾಘವೇಂದ್ರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ.

ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ ದಾಖಲೆ ಇಲ್ಲದ ಚಿನ್ನ ವಶಕ್ಕೆ ಪಡೆಯಲಾಗಿದೆ. ದಾವಣಗೆರೆಯ ಪ್ರತಿಷ್ಠಿತ ಜುವೆಲ್ಲರಿ ಮಳಿಗೆಗೆ ಸೇರಿದ ಚಿನ್ನ ಎಂಬ ಮಾಹಿತಿ ಗೊತ್ತಾಗಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular