HomeBusinessಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಚಿನ್ನ, ಬೆಳ್ಳಿ ದರ ಹೆಚ್ಚಳ

ಚಿನ್ನಾಭರಣ ಖರೀದಿ ನಿರೀಕ್ಷೆಯಲ್ಲಿದ್ದವರಿಗೆ ಶಾಕ್: ಚಿನ್ನ, ಬೆಳ್ಳಿ ದರ ಹೆಚ್ಚಳ

ನವದೆಹಲಿ: ಚಿನ್ನ ಮತ್ತು ಬೆಳ್ಳಿ ದರ ಹೆಚ್ಚಳವಾಗಿದೆ. ದೆಹಲಿಯ ಚಿನಿವಾರಪೇಟೆಯಲ್ಲಿ 10 ಗ್ರಾಂ ಚಿನ್ನದ ದರ 350 ರೂಪಾಯಿ ಹೆಚ್ಚಳವಾಗಿದ್ದು, 60,600 ರೂ.ಗೆ ಮಾರಾಟವಾಗಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿರುವುದರಿಂದ ದೇಶಿಯ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಕಂಡಿದೆ ಎಂದು ಹೆಚ್‌.ಡಿ.ಎಫ್.ಸಿ. ಸೆಕ್ಯೂರಿಟಿಸ್ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬೆಳ್ಳಿ ದರ ಕೆಜಿಗೆ 650 ರೂ. ಹೆಚ್ಚಳವಾಗಿದ್ದು, 73,550 ರೂಪಾಯಿಗೆ ತಲುಪಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ ಮತ್ತು ಬೆಳ್ಳಿ ದರ ಗರಿಷ್ಠ ಮಟ್ಟದಲ್ಲಿಯೇ ಇದ್ದು, ಒಂದು ಔನ್ಸ್ ಚಿನ್ನದ ದರ 1976 ಡಾಲರ್ ಇದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular