BREAKING: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣ: ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ವಿಚಾರಣೆ

ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ನಟಿ ರನ್ಯಾ ರಾವ್ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಡಿಆರ್ ಐ ಅಧಿಕಾರಿಗಳು ರನ್ಯಾ ರಾವ್ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರ ವಿಚಾರಣೆ ನಡೆಸಿದ್ದಾರೆ.

ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಜೈಲು ಸೇರಿರುವ ನಟಿ ರನ್ಯಾ ರಾವ್ ಕೇಸ್ ಗೆ ಸಂಬಂಧಿಸಿದಂತೆ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೆ ಡಿಆರ್ ಐ ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಹಿನ್ನೆಲೆಯಲ್ಲಿ ರಾಮಚಂದ್ರ ರಾವ್ ವಿಚಾರಣೆ ಹಾಜರಾಗಿದ್ದಾರೆ.

ಕರ್ನಾಟಕ ರಾಜ್ಯ ಇತಿಹಾಸದಲ್ಲಿಯೇ ಹಾಲಿ ಡಿಜಿಪಿಯೊಬ್ಬರನ್ನು ವಿಚಾರಣೆಗೆ ಒಳಪಡಿಸಿರುವ ಮೊದಲ ಪ್ರಕರಣ ಇದಾಗಿದೆ ಎಂದು ತಿಳಿದುಬಂದಿದೆ.

ದುಬೈನಿಂದ 14.2 ಕೆಜಿ ಚಿನ್ನವನ್ನು ಕಳ್ಳಸಾಗಣೆ ಮಾಡಿದ ಆರೋಪದ ಮೇಲೆ ಮಾರ್ಚ್ 3ರಂದು ಡಿಆರ್‌ಐ ಅಧಿಕಾರಿಗಳು ಕೇಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಟಿ ರನ್ಯಾ ರಾವ್ ಅವರನ್ನು ಬಂಧಿಸಿದ್ದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

  • ಹೌದು (54%, 187 Votes)
  • ಇಲ್ಲ (34%, 118 Votes)
  • ಹೇಳಲಾಗುವುದಿಲ್ಲ (11%, 39 Votes)

Total Voters: 344

Loading ... Loading ...

Most Read