ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ಗೆ ಸಂಬಂಧಿಸಿದಂತೆ ಪ್ರಕರಣದ ಎರಡನೇ ಆರೋಪಿ ತರುಣ್ ರಾಜು ಜಾಮೀನು ಅರ್ಜಿ ವಜಾಗೊಂಡಿದೆ.
ಅಕ್ರಮ ಚಿನ್ನ ಸಾಗಾಟ ಪ್ರಕರಣದಲ್ಲಿ ಎ1 ಆರೋಪಿ ನಟಿ ರನ್ಯಾ ರಾವ್ ಈಗಾಗಲೇ ಜೈಲು ಸೇರಿದ್ದಾರೆ. ಇದೇ ಪ್ರಕರಣದ ಎರಡನೇ ಆರೋಪಿ ತರುಣ್ ರಾಜು ಜಾಮೀನಿಗಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 64ನೇ ಸೆಷನ್ಸ್ ಕೋರ್ಟ್, ಜಾಮೀನು ಅರ್ಜಿ ವಜಾಗೊಳಿಸಿದೆ. ಈ ಹಿನ್ನೆಲೆಯಲ್ಲಿ ತರುಣ್ ರಾಜುಗೆ ಜೈಲುವಾಸವೇ ಗತಿಯಾಗಿದೆ.
ಇದೇ ವೇಳೆ ಆರೋಪಿಗಳಾದ ರನ್ಯಾ ರಾವ್, ಸಾಹಿಲ್ ಜೈನ್ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ ೨೧ರವರೆಗೆ ವಿಸ್ತರಣೆ ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.