ಬೆಂಗಳೂರು: ಗೋಲ್ಡ್ ಸ್ಮಗ್ಲಿಂಗ್ ಕೇಸ್ ನಲ್ಲಿ ಬಂಧನಕ್ಕೀಡಾಗಿ ಜೈಲು ಸೇರಿದ್ದ ನಟಿ ರನ್ಯಾ ರಾವ್ ಗೆ ಬಿಗ್ ರಿಲೀಫ್ ಸಿಕ್ಕಿದೆ. ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ನಟಿ ರನ್ಯಾ ರಾವ್ ಗೆ ಬೆಂಗಳೂರಿನ ಆರ್ಥಿಕ ವ್ಯವಹರಗಳ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಪ್ರಕರಣದ ಎರಡನೇ ಆರೋಪಿ ತರುಣ್ ಕೊಂಡರಾಜುಗೂ ಜಾಮೀನು ಮಂಜೂರು ಮಾಡಿ ಕೋರ್ಟ್ ಆದೇಶ ಹೊರಡಿಸಿದೆ.
60 ದಿನಗಳು ಕಳೆದರೂ ಡಿಆರ್ ಐ ಅಧಿಕಾರಿಗಳು ದೋಷಾರೋಪ ಪಟ್ಟಿ ಸಲ್ಲಿಸದ ಹಿನ್ನೆಲೆಯಲ್ಲಿ ಆರೋಪಿಗಳು ಜಾಮೀನು ಕೋರಿ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.