HomeKarnatakaBIG NEWS: ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ; ಮಂಗಳೂರು ಏರ್ ಪೋರ್ಟ್ ನಲ್ಲಿ ಇಬ್ಬರು...

BIG NEWS: ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ; ಮಂಗಳೂರು ಏರ್ ಪೋರ್ಟ್ ನಲ್ಲಿ ಇಬ್ಬರು ಅರೆಸ್ಟ್

ಮಂಗಳೂರು: ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಏನೆಲ್ಲ ಖತರ್ನಾಕ್ ಐಡಿಯಾಗಳನ್ನು ಮಾಡಿಯೂ ಸಿಕ್ಕಿಬಿದ್ದಿದ್ದಾರೆ ನೋಡಿ. ಗುದದ್ವಾರದಲ್ಲಿ ಚಿನ್ನ ಬಚ್ಚಿಟ್ಟು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಮಂಗಳೂರು ಏರ್ ಪೋರ್ಟ್ ನಲ್ಲಿ ಬಂಧಿಸಲಾಗಿದೆ.

ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ಇಬ್ಬರು ಪ್ರಯಾಣಿಕರು ಅನುಮಾನಾಸ್ಪದವಾಗಿ ನಡೆದುಕೊಳ್ಳುತ್ತಿದ್ದರು. ಅವರ ಚಲನವಲನ ಗಮನಿಸಿದ ಕಸ್ಟಮ್ಸ್ ಅಧಿಕಾರಿಗಳು ಇಬ್ಬರನ್ನು ವಶಕ್ಕೆ ಪಡೆದು ತಪಾಸಣೆ ನಡೆಸಿದಾಗ ಗುದದ್ವಾರದಲ್ಲಿ ಚಿನ್ನವಿಟ್ಟು ಸಾಗಾಟ ಮಾಡುತ್ತಿರುವುದು ಪತ್ತೆಯಾಗಿದೆ.

ಓರ್ವ ಚಿನ್ನವನ್ನು ಪೇಸ್ಟ್ ರೀತಿಯಲ್ಲಿ ಪರಿವರ್ತಿಸಿ ಅದನ್ನು ಕ್ಯಾಪ್ಸೂಲ್ ಗಳಲ್ಲಿ ತುಂಬಿ ಗುದದ್ವಾರದಲ್ಲಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ. ಇನ್ನೋರ್ವ ಚಾಕೊಲೇಟ್ ಬಾಕ್ಸ್ ನಲ್ಲಿ ಚಿನ್ನವನ್ನಿಟ್ಟು ಸಗಾಟ ಮಾಡುತ್ತಿದ್ದ. ಇಬ್ಬರು ಆರೋಪಿಗಳಿಂದ 50.93 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದು, ಇಬ್ಬರನ್ನು ಬಂಧಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular